ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಸುರೇಶ್‌ಕುಮಾರ್‌ ನಾಮಪತ್ರ ಸಲ್ಲಿಕೆ

6

ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಸುರೇಶ್‌ಕುಮಾರ್‌ ನಾಮಪತ್ರ ಸಲ್ಲಿಕೆ

Published:
Updated:
ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಸುರೇಶ್‌ಕುಮಾರ್‌ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ(ಮೇ 25) ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಎಸ್‌.ಸುರೇಶ್‌ಕುಮಾರ್‌ ಗುರುವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರಕ್ಕೆ ಕಾರ್ಕಳದ ಶಾಸಕ ಸುನೀಲ್‌ ಕುಮಾರ್‌ ಹಾಗೂ ಮಲ್ಲೇಶ್ವರದ ಕ್ಷೇತ್ರದ ಶಾಸಕ ಡಾ.ಸಿ.ಎನ್‌. ಅಶ್ವತ್ಥನಾರಾಯಣ್‌ ಅವರು ಸಹಿ ಹಾಕಿದ್ದಾರೆ.

ಈ ಸಂಬಂಧ ಸುರೇಶ್‌ಕುಮಾರ್, ನಾಳೆ ನಡೆಯಲಿರುವ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ, ಮತ್ತಿತರ ಹಿರಿಯರ ಸೂಚನೆಯ ಮೇರೆಗೆ ಅಭ್ಯರ್ಥಿಯಾಗಿ ನಾನು ಇಂದು ನಾಮಪತ್ರ ಸಲ್ಲಿಸಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ನಾಮಪತ್ರಕ್ಕೆ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಮತ್ತು ಮಲ್ಲೇಶ್ವರ ಕ್ಷೇತ್ರದ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಸಹಿ ಮಾಡಿದ್ದಾರೆ ಹಾಗೂ ಸಲ್ಲಿಕೆ ವೇಳೆ ಜತೆಗಿದ್ದರು ಎಂದು ತಿಳಿಸಿದ್ದಾರೆ.

ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ, ಸಭಾಧ್ಯಕ್ಷ ಸ್ಥಾನಕ್ಕೆ ಪ್ರತಿಸ್ಪರ್ಧಿ ಯಾರೂ ಇರಲಾರರು ಎಂದುಕೊಂಡಿದ್ದ ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಗೆ ಟಾಂಗ್‌ ಕೊಟ್ಟಿದೆ.

ಮೇ 25ರಂದು ಸಭಾಧ್ಯಕ್ಷರ ಆಯ್ಕೆ ಬಳಿಕ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಹುಮತ ಯಾಚನೆ ಮಾಡಲಿದ್ದಾರೆ. 

ಆರ್‌ಆರ್‌ನಗರ ಚುನಾವಣೆ ಸಮಾಲೋಚನೆ

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಗೊರಗುಂಟೆಪಾಳ್ಯದಲ್ಲಿ ಬಿಜೆಪಿ ಕಾರ್ಯಕರ್ತರೊಡನೆ ಚುನಾವಣಾ ಕಾರ್ಯ ಕುರಿತಂತೆ ಸಮಾಲೋಚನೆ ನಡೆಸಿರುವುದಾಗಿ ಸುರೇಶ್‌ಕುಮಾರ್‌ ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ಈ ಪ್ರದೇಶ ಮೊದಲು ರಾಜಾಜಿನಗರ ಕ್ಷೇತ್ರದ ಭಾಗವಾಗಿತ್ತು ಮತ್ತು ಆಗಿನ ಎಲ್ಲಾ ಕಾರ್ಯಕರ್ತರೂ ಈಗಲೂ  ಸಕ್ರಿಯವಾಗಿ ಉಳಿದಿದ್ದಾರೆ ಎಂದು ಹೇಳಿದ್ದಾರೆ.‌

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry