7

ವಿಧಾನಸಭೆ ಅಧ್ಯಕ್ಷ ಸ್ಥಾನಕ್ಕೆ ಮೈತ್ರಿಕೂಟದಿಂದ ಕೆ.ಆರ್. ರಮೇಶ್‌ಕುಮಾರ್‌ ನಾಮಪತ್ರ ಸಲ್ಲಿಕೆ

Published:
Updated:
ವಿಧಾನಸಭೆ ಅಧ್ಯಕ್ಷ ಸ್ಥಾನಕ್ಕೆ ಮೈತ್ರಿಕೂಟದಿಂದ ಕೆ.ಆರ್. ರಮೇಶ್‌ಕುಮಾರ್‌ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ(ಮೇ.25) ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಕೆ.ಆರ್‌.ರಮೇಶ್‌ಕುಮಾರ್‌ ಗುರುವಾರ ನಾಮಪತ್ರ ಸಲ್ಲಿಸಿದರು.

ಮೈತ್ರಿಕೂಟದ ವತಿಯಿಂದ ಕೆ. ಅರ್.ರಮೇಶ್ ಕುಮಾರ್ ಅವರು ನಾಮಪತ್ರ ಸಲ್ಲಿಸಿದ ವೇಳೆ ತಾವು ಜತೆಗಿದ್ದುದಾಗಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆ ಸ್ಪೀಕರ್ ಆಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಹಿರಿಯ ಮುತ್ಸದ್ದಿ ರಮೇಶ್ ಕುಮಾರ್ ಅವರು ಮತ್ತೆ ಆಯ್ಕೆ ಆಗುತ್ತಾರೆ ಎನ್ನುವುದು ನನ್ನ ವಿಶ್ವಾಸವಿದೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

ಶುಕ್ರವಾರ ಬೆಳಿಗ್ಗೆ 12.15ಕ್ಕೆ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಮೊದಲಿಗೆ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಬಳಿಕ, ಮೈತ್ರಿಕೂಟದ ನೂತನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬಹುಮತ ಯಾಚಿಸಲಿದ್ದಾರೆ.

* ಇವನ್ನೂ ಓದಿ...
ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಸುರೇಶ್‌ಕುಮಾರ್‌ ನಾಮಪತ್ರ ಸಲ್ಲಿಕೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry