ಬಹುಮತ ಸಾಬೀತು ವೇಳೆ ಬಿಜೆಪಿ ಬೆಂಬಲಿಸಲು ಆಮಿಷ ಆರೋಪ: ಎಸಿಬಿಗೆ ದೂರು

7

ಬಹುಮತ ಸಾಬೀತು ವೇಳೆ ಬಿಜೆಪಿ ಬೆಂಬಲಿಸಲು ಆಮಿಷ ಆರೋಪ: ಎಸಿಬಿಗೆ ದೂರು

Published:
Updated:
ಬಹುಮತ ಸಾಬೀತು ವೇಳೆ ಬಿಜೆಪಿ ಬೆಂಬಲಿಸಲು ಆಮಿಷ ಆರೋಪ: ಎಸಿಬಿಗೆ ದೂರು

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಬಹುಮತ ಸಾಬೀತು ವೇಳೆ ಬಿಜೆಪಿಗೆ ಬೆಂಬಲಿಸುವಂತೆ ಶಾಸಕರಿಗೆ ಹಣದ ಆಮಿಷ ಒಡ್ಡಲಾಗಿದೆ ಎಂದು ಕೆಪಿಸಿಸಿ ಕಾನೂನು ಘಟಕದ ವಕೀಲರು ಎಸಿಬಿಗೆ ದೂರು ನೀಡಿದ್ದಾರೆ.

ಬಹುಮತ ಸಾಬೀತು ವೇಳೆ ಬಿಜೆಪಿ ಬೆಂಬಲಿಸುವಂತೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಪಕ್ಷದ ಮುಖಂಡರ ವಿರುದ್ಧ ಕ್ರಿಮಿನಲ್‌ ಪಿತೂರು ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಪಿಸಿಸಿ ಕಾನೂನು ಘಟಕದ ವಕೀಲರು ದೂರಿನಲ್ಲಿ ಹೇಳಿದ್ದಾರೆ.

ಈ ಸಂಬಂಧ ಅವರು, ಎಸಿಬಿಯ ಬೆಂಗಳೂರು ನಗರ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಮೇ 17ರಂದು ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸಿದ್ದರು. ಬಳಿಕ, ಅಧಿವೇಶನದಲ್ಲಿ ಬಹುಮತ ಸಾಬೀತು ಪಡಿಸುವ ಮುನ್ನವೇ ವಿದಾಯ ಭಾಷಣ ಮಾಡಿ, ರಾಜೀನಾಮೆ ನೀಡಿದ್ದರು.

* ಇವನ್ನೂ ಓದಿ...

* ನಾಳೆಯ ಬಹುಮತ ಸಾಬೀತು ಅಧಿವೇಶನದತ್ತ ಎಲ್ಲರ ಚಿತ್ತ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry