7

ಇಂಧನ ಬೆಲೆ ತಗ್ಗಿಸುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸವಾಲೆಸೆದ ರಾಹುಲ್‌ ಗಾಂಧಿ

Published:
Updated:
ಇಂಧನ ಬೆಲೆ ತಗ್ಗಿಸುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸವಾಲೆಸೆದ ರಾಹುಲ್‌ ಗಾಂಧಿ

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್​ ಕೊಹ್ಲಿ ಅವರು ನೀಡಿದ ಫಿಟ್​ನೆಸ್​ ಸವಾಲನ್ನು ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್​ ಅಧ್ಯಕ್ಷ ರಾಹುಲ್‌​ ಗಾಂಧಿ ಅವರು ಮತ್ತೊಂದು ಸವಾಲು ಹಾಕಿದ್ದಾರೆ.

ದೇಶದಲ್ಲಿ ಪ್ರತಿನಿತ್ಯ ಏರಿಕೆಯಾಗುತ್ತಿರುವ ಇಂಧನ ಬೆಲೆಯನ್ನು ಇಳಿಕೆ ಮಾಡುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌, ‘ಪ್ರೀಯ ಪ್ರಧಾನಿ ಅವರೆ ವಿರಾಟ್‌ ಕೊಹ್ಲಿ ನೀಡಿದ ಫಿಟ್‌ನೆಸ್‌ ಸವಾಲನ್ನು ನೀವು ಸ್ವೀಕರಿಸಿದಕ್ಕೆ ಸಂತೋಷವಾಗಿದೆ. ಆದರೆ, ನನ್ನದೊಂದು ‘ಇಂಧನ ಸವಾಲು’ ಹೀಗಿದೆ. ಇಂಧನ ದರ ಕಡಿಮೆ ಮಾಡಿ. ಇಲ್ಲವಾದರೆ ನಮ್ಮ ಪಕ್ಷ(ಕಾಂಗ್ರೆಸ್‌) ರಾಷ್ಟ್ರವ್ಯಾಪಿ ಬೃಹತ್‌ ಪ್ರತಿಭಟನೆ ನಡೆಸಲಿದೆ. ನಾನು ನಿಮ್ಮ ಪ್ರತಿಕ್ರಿಯೆಗೆ ಕಾಯುತ್ತಿದ್ದೇನೆ’ ಎಂದು ಬರೆದಿದ್ದಾರೆ.

*

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್​ ಟ್ವೀಟ್‌ ಮಾಡಿದ್ದು, ದೇಶದ ಯುವಕರಿಗೆ ಉದ್ಯೋಗ ಒದಗಿಸುವಿಕೆ, ರೈತರ ಪರಿಹಾರ ಹಾಗೂ ದಲಿತರ ಮೇಲಿನ ದೌರ್ಜನ್ಯ ತಡೆಯುವಂತೆ ಪ್ರಧಾನಿ ಮೋದಿ ಅವರನ್ನು ಆಗ್ರಹಿಸಿದ್ದಾರೆ. *

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry