ಸ್ವಾಮೀಜಿಯನ್ನು ಭೇಟಿಯಾದ ಕುಮಾರಸ್ವಾಮಿ

7

ಸ್ವಾಮೀಜಿಯನ್ನು ಭೇಟಿಯಾದ ಕುಮಾರಸ್ವಾಮಿ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಗರದ ಪಟ್ಟನಾಯಕನಹಳ್ಳಿ ನಂಜಾವಧೂತ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬಿಜೆಪಿ ನಾಯಕರು ನಮ್ಮನ್ನು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಟೀಕೆ– ಟಿಪ್ಪಣಿ ಮಾಡುವುದನ್ನು ಬಿಟ್ಟು ಸಕಾರಾತ್ಮಕ ರಾಜಕಾರಣದಲ್ಲಿ ತೊಡಗಿಕೊಳ್ಳಲಿ’ ಎಂದು ಸಲಹೆ ನೀಡಿದರು.

ನಂಜಾವಧೂತ ಸ್ವಾಮೀಜಿ ಮಾತನಾಡಿ, ‘ಒಕ್ಕಲಿಗರೊಬ್ಬರು ಮುಖ್ಯಮಂತ್ರಿ ಆಗಿದ್ದಾರೆ. ಟೀಕೆ ಮಾಡುವುದನ್ನು ಬಿಟ್ಟು ಆಡಳಿತ ನಡೆಸಲು ಬಿಡಬೇಕು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry