ನಲಪಾಡ್‌ ಜಾಮೀನು ಅರ್ಜಿ ವಿಚಾರಣೆ 28ಕ್ಕೆ

7

ನಲಪಾಡ್‌ ಜಾಮೀನು ಅರ್ಜಿ ವಿಚಾರಣೆ 28ಕ್ಕೆ

Published:
Updated:
ನಲಪಾಡ್‌ ಜಾಮೀನು ಅರ್ಜಿ ವಿಚಾರಣೆ 28ಕ್ಕೆ

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸುತ್ತಿದ್ದಂತೆ, ಆರೋಪಿ ಮೊಹಮ್ಮದ್‌ ನಲಪಾಡ್‌ ಜಾಮೀನು ಕೋರಿ 62ನೇ ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ.

ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ವಿಚಾರಣೆಯನ್ನು ಮೇ 28ಕ್ಕೆ ಮುಂದೂಡಿದೆ. ನಲಪಾಡ್‌ಗೆ ಜಾಮೀನು ನೀಡಲು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ (ಎಸ್‌ಪಿಪಿ) ಎಂ.ಎಸ್‌. ಶ್ಯಾಮಸುಂದರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

‘ನಲಪಾಡ್‌ ಘೋರ ಅಪರಾಧವೆಸಗಿದ್ದು, ಜೈಲಿನಿಂದ ಹೊರಬಂದರೆ ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇದೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಈ ಹಿಂದೆ ಸೆಷನ್ಸ್ ಕೋರ್ಟ್‌ ಮತ್ತು ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ್ದವು. ತನಿಖೆಯನ್ನು ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, 600ಕ್ಕೂ‌ ಹೆಚ್ಚು ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಯು.ಬಿ. ಸಿಟಿಯ ಫರ್ಜಿ ಕೆಫೆಯಲ್ಲಿ ಫೆಬ್ರುವರಿ 17ರಂದು ರಾತ್ರಿ ನಡೆದಿದ್ದ ಘಟನೆ ಸಂಬಂಧ ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry