ಪಾಕ್‌ನಲ್ಲಿ ಭಾರತದ ರಾಜತಾಂತ್ರಿಕ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ
ಐಎಸ್ ಸಂಪರ್ಕ ಶಂಕೆ: ಭಾರತೀಯ ರಾಜತಾಂತ್ರಿಕರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಂಧನ

ಲಖನೌ: ಐಎಸ್ ಸಂಘಟನೆ ಜತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ವ್ಯಕ್ತಿಯೊಬ್ಬನನ್ನು ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಪಾಕಿಸ್ತಾನದಲ್ಲಿನ ಭಾರತೀಯ ರಾಜತಾಂತ್ರಿಕರ ಮನೆಯಲ್ಲಿ ಈತ ಕೆಲಸ ಮಾಡುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದ ಪಿಥೋರ್‌ಗಡದ ದಿದಾಹಿತ್ ಪ್ರದೇಶದ ರಮೇಶ್ ಸಿಂಗ್ ಕನ್ಯಾಲ್ ಬಂಧಿಸಲಾಗಿರುವ ವ್ಯಕ್ತಿ. ಈತ 2015ರಿಂದ 2017ರ ತನಕ ಭಾರತದ ರಾಜತಾಂತ್ರಿಕರ ಮನೆಯಲ್ಲಿ ಕೆಲಸ ಮಾಡಿದ್ದ. ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದಾಗಿ ಕನ್ಯಾಲ್ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
‘ಕನ್ಯಾಲ್‌ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲು ಲಖನೌಗೆ ಕರೆತರಲಾಗಿದೆ’ ಎಂದು ಪಿಥೋರ್‌ಗಡದ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರ ರಾಜ್‌ಗುರು ತಿಳಿಸಿದ್ದಾರೆ.
ಬರಹ ಇಷ್ಟವಾಯಿತೆ?
0
0
0
0
0