ಪಾಕಿಸ್ತಾನ ಚುನಾವಣೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸ್ಪರ್ಧೆ

7

ಪಾಕಿಸ್ತಾನ ಚುನಾವಣೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸ್ಪರ್ಧೆ

Published:
Updated:

ಇಸ್ಲಾಮಾಬಾದ್‌: ಇದೇ ಮೊದಲ ಬಾರಿಗೆ 13 ಲೈಂಗಿಕ ಅಲ್ಪಸಂಖ್ಯಾತರು ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಪಾಕಿಸ್ತಾನದ ಒಟ್ಟು ಜನಸಂಖ್ಯೆಯಲ್ಲಿ  10,418 ಲೈಂಗಿಕ ಅಲ್ಪಸಂಖ್ಯಾತರಿದ್ದಾರೆ ಎಂದು ವರದಿ ತಿಳಿಸಿದೆ. ಅಖಿಲ ಪಾಕಿಸ್ತಾನ ಅಲ್ಪಸಂಖ್ಯಾತರ ಚುನಾವಣಾ ಜಾಲವು ಚುನಾವಣಾ ಆಯೋಗದ ಜತೆ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ರಾಜಕೀಯ ಪಾಲ್ಗೊಳ್ಳುವಿಕೆ ಮಹತ್ವದ ಕುರಿತು ಚರ್ಚೆ ನಡೆಯಿತು.

13 ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿಗಳ ಪೈಕಿ 11 ಮಂದಿ ಪ್ರಾಂತೀಯ ಚುನಾವಣೆ ಮತ್ತು ಇಬ್ಬರು ರಾಷ್ಟ್ರೀಯ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವರು ಎಂದು ‘ದಿ ಎಕ್ಸ್‌ಪ್ರೆಸ್‌ ಟ್ರಿಬ್ಯೂನ್‌’ ವರದಿ ಮಾಡಿದೆ.

ಜುಲೈ 25–27ರಂದು ಚುನಾವಣೆ ನಡೆಯುವ ಸಾಧ್ಯತೆ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry