ಕೆನಡಾದ ಬಾಂಬೆ ಬೇಲ್ ರೆಸ್ಟೋರೆಂಟ್‌ನಲ್ಲಿ ಸ್ಫೋಟ: ಮೂವರ ಸ್ಥಿತಿ ಗಂಭೀರ

7

ಕೆನಡಾದ ಬಾಂಬೆ ಬೇಲ್ ರೆಸ್ಟೋರೆಂಟ್‌ನಲ್ಲಿ ಸ್ಫೋಟ: ಮೂವರ ಸ್ಥಿತಿ ಗಂಭೀರ

Published:
Updated:
ಕೆನಡಾದ ಬಾಂಬೆ ಬೇಲ್ ರೆಸ್ಟೋರೆಂಟ್‌ನಲ್ಲಿ ಸ್ಫೋಟ: ಮೂವರ ಸ್ಥಿತಿ ಗಂಭೀರ

ಒಟ್ಟಾವ: ಕೆನಡಾದ ಮಿಸ್ಸಿಗುವಾದಲ್ಲಿ ಭಾರತೀಯ ರೆಸ್ಟೋರೆಂಟ್‌ನಲ್ಲಿ ಸ್ಫೋಟ ಸಂಭವಿಸಿದ್ದು 15 ಜನರು ಗಾಯಗೊಂಡಿದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಕೆನಡಾ ಮಾಧ್ಯಮಗಳು ವರದಿ ಮಾಡಿವೆ.

ಇಲ್ಲಿನ ಬಾಂಬೆ ಬೇಲ್  ರೆಸ್ಟೋರೆಂಟ್‌ನಲ್ಲಿ ಗುರುವಾರ ರಾತ್ರಿ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಒಟ್ಟು 15 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಇವರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ಕಾರಣ ತಿಳಿದು ಬಂದಿಲ್ಲ, ಘಟನೆ ಕುರಿತಂತೆ ಕೆನಡಾ ಸರ್ಕಾರ ತನಿಖೆಗೆ ಆದೇಶ ಮಾಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry