ಜಿಎಸ್‌ಟಿ ವ್ಯಾಪ್ತಿಗೆ ತೈಲ: ಪರಿಶೀಲನೆ

7

ಜಿಎಸ್‌ಟಿ ವ್ಯಾಪ್ತಿಗೆ ತೈಲ: ಪರಿಶೀಲನೆ

Published:
Updated:
ಜಿಎಸ್‌ಟಿ ವ್ಯಾಪ್ತಿಗೆ ತೈಲ: ಪರಿಶೀಲನೆ

ನವದೆಹಲಿ: ದಿನೇ ದಿನೇ ದುಬಾರಿಯಾಗುತ್ತಿರುವ ಇಂಧನ ಬೆಲೆಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಕೇಂದ್ರ ಸರ್ಕಾರವು, ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಸಾಧ್ಯತೆಗಳನ್ನು ಪರಿಶೀಲಿಸಲು ಮುಂದಾಗಿದೆ.

‘ಜಿಎಸ್‌ಟಿ ಮಂಡಳಿಯ ಮುಂದಿನ ಸಭೆಯಲ್ಲಿ ಈ ವಿಷಯ ಪ್ರಮುಖವಾಗಿ ಚರ್ಚೆಗೆ ಬರುವ ನಿರೀಕ್ಷೆ ಇದೆ’ ಎಂದು ಹಣಕಾಸು ಸಚಿವ ಪೀಯೂಷ್‌ ಗೋಯೆಲ್‌ ಹೇಳಿದ್ದಾರೆ. ಸಭೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಎನ್‌ಡಿಎ ಸರ್ಕಾರ 4 ವರ್ಷಗಳಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟದಿಂದ ₹ 16.57 ಲಕ್ಷ ಕೋಟಿಗಳಷ್ಟು ತೆರಿಗೆ ವರಮಾನ ಸಂಗ್ರಹಿಸಿದೆ. ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಪೆಟ್ರೋಲ್‌, ಡೀಸೆಲ್‌ ಬೆಲೆಗಳು ಪ್ರತಿ ಲೀಟರ್‌ಗೆ ₹ 26ರಷ್ಟು ಅಗ್ಗವಾಗಲಿವೆ ಎಂದು ತೆರಿಗೆ ಪರಿಣತರು ಹೇಳಿದ್ದಾರೆ.

‘ಜಿಎಸ್‌ಟಿ ವ್ಯಾಪ್ತಿಗೆ ತರದೇ ಸರ್ಕಾರವು ಪೆಟ್ರೋಲ್‌ ಬೆಲೆಯನ್ನು ಪ್ರತಿ ಲೀಟರ್‌ಗೆ ₹ 25ರಷ್ಟು ತಗ್ಗಿಸಲು ಸಾಧ್ಯ ಇದೆ’ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಇತ್ತೀಚೆಗೆ ಹೇಳಿದ್ದರು.

ಇಂಧನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕೆಂದು ಅನೇಕರು ಪ್ರತಿಪಾದಿಸುತ್ತಿದ್ದರೂ, ಹಲವು ರಾಜ್ಯ ಸರ್ಕಾರಗಳು ಈ ಚಿಂತನೆಗೆ ವಿರೋಧ ವ್ಯಕ್ತಪಡಿಸಿವೆ.  ಕೇಂದ್ರವೂ ಈ ಬಗ್ಗೆ ಒಲವು ಹೊಂದಿಲ್ಲ ಎಂದು ತೆರಿಗೆ ಪರಿಣತರೂ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry