ಚಂದಾ ಕೊಚ್ಚರ್‌ಗೆ ‘ಸೆಬಿ’ ನೋಟಿಸ್‌

7
ವಿಡಿಯೊಕಾನ್‌ಗೆ ಸಾಲ ಮಂಜೂರಾತಿ: ಸ್ವಹಿತಾಸಕ್ತಿ ಸಂಘರ್ಷ ವಿವಾದ

ಚಂದಾ ಕೊಚ್ಚರ್‌ಗೆ ‘ಸೆಬಿ’ ನೋಟಿಸ್‌

Published:
Updated:
ಚಂದಾ ಕೊಚ್ಚರ್‌ಗೆ ‘ಸೆಬಿ’ ನೋಟಿಸ್‌

ಮುಂಬೈ: ವಿಡಿಯೊಕಾನ್‌ ಸಮೂಹಕ್ಕೆ ಸಾಲ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ನ ಸಿಇಒ ಚಂದಾ ಕೊಚ್ಚರ್‌ ಅವರಿಗೆ ಭಾರತೀಯ ಷೇರು ನಿಯಂತ್ರಣ ಮಂಡಳಿಯು (ಸೆಬಿ) ನೋಟಿಸ್‌ ಜಾರಿ ಮಾಡಿದೆ.

ಮೇ 24ರಂದು ‘ಸೆಬಿ’ ನೋಟಿಸ್‌ ಬಂದಿತ್ತು. ಇದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಾಗಿದೆ. ಷೇರುಪೇಟೆಯ ವಹಿವಾಟಿನ ನಿಯಮಗಳನ್ನು ಪಾಲಿಸದ ಆರೋಪಗಳ ಕುರಿತು ಮಾಹಿತಿ ನೀಡಲಾಗಿದೆ.

ವಿಡಿಯೊಕಾನ್‌ ಸಮೂಹ ಮತ್ತು ಎನ್‌ಯುಪವರ್‌ ರಿನ್ಯೂವಬಲ್ಸ್‌ ನಡುವಣ ಕೆಲ ವ್ಯವಹಾರಗಳ ಬಗ್ಗೆ ‘ಸೆಬಿ’ ಕೇಳಿದ ಪ್ರಶ್ನೆಗಳಿಗೆ ಸಮಜಾಯಿಷಿ ನೀಡಲಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ಬ್ಯಾಂಕ್‌, 2012ರಲ್ಲಿ ವಿಡಿಯೊಕಾನ್‌ಗೆ ₹ 3,250 ಕೋಟಿ ಸಾಲ ಮಂಜೂರಾತಿ ಮಾಡಿರುವ ಮತ್ತು ಚಂದಾ ಕೊಚ್ಚರ್‌ ಅವರ ಪತಿ ದೀಪಕ್‌ ಕೊಚ್ಚರ್‌ ಅವರು ಈ ಪ್ರಕರಣದಲ್ಲಿ ನಿರ್ವಹಿಸಿರುವ ಪಾತ್ರದ ಬಗ್ಗೆ ಸಿಬಿಐ ಪ್ರಾಥಮಿಕ ತನಿಖೆ ಆರಂಭಿಸಿದೆ.

ಐಸಿಐಸಿಐ ಬ್ಯಾಂಕ್‌ ಸೇರಿದಂತೆ ಬ್ಯಾಂಕ್‌ಗಳ ಒಕ್ಕೂಟದಿಂದ ಸಾಲ ಮಂಜೂರಾತಿ ಆಗುತ್ತಿದ್ದಂತೆ ವಿಡಿಯೊಕಾನ್‌ ಅಧ್ಯಕ್ಷ ವೇಣುಗೋಪಾಲ್‌ ಧೂತ್‌ ಅವರು, ದೀಪಕ್‌ ಕೊಚ್ಚರ್‌ ಅವರ ಒಡೆತನದ ಎನ್‌ಯುಪವರ್‌ ರಿನ್ಯೂವಬಲ್ಸ್‌ ಸಂಸ್ಥೆಯಲ್ಲಿ ₹ 64 ಕೋಟಿಗಳನ್ನು ಹೂಡಿಕೆ ಮಾಡಿದ್ದರು.

ಇದೊಂದು ಪರಸ್ಪರ ಕೊಡು – ತೆಗೆದುಕೊಳ್ಳುವ ವ್ಯವಹಾರ ಆಗಿತ್ತು ಎಂದು ದೂರಲಾಗಿತ್ತು.

ಈ ಸಾಲ ಮಂಜೂರಾತಿಯಲ್ಲಿ ತನ್ನಿಂದ ಯಾವುದೇ ಲೋಪ ಉಂಟಾಗಿಲ್ಲ. ವಿಡಿಯೊಕಾನ್‌ಗೆ ಸಾಲ ಮಂಜೂರು ಮಾಡಿದ ಬ್ಯಾಂಕ್‌ಗಳ ಒಕ್ಕೂಟದ ಭಾಗವಾಗಿ ಬ್ಯಾಂಕ್ ತನ್ನ ಕರ್ತವ್ಯ ನಿರ್ವಹಿಸಿದೆ ಎಂದು ಐಸಿಐಸಿಐ ಬ್ಯಾಂಕ್‌, ತನ್ನ ವಿರುದ್ಧದ ಆರೋಪಗಳನ್ನು ಈಗಾಗಲೇ ತಳ್ಳಿ ಹಾಕಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry