3 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ

7

3 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ

Published:
Updated:
3 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ

ಬೆಂಗಳೂರು: ನೈಋತ್ಯ ಮುಂಗಾರು ಇನ್ನು ಮೂರು ದಿನಗಳಲ್ಲಿ ರಾಜ್ಯವನ್ನು ಪ್ರವೇಶಿಸಲಿದೆ. ಅಂಡಮಾನ್‌– ನಿಕೋಬಾರ್‌ ದ್ವೀಪ ಪ್ರದೇಶಗಳಲ್ಲಿ ಮುಂಗಾರು ಪ್ರವೇಶಕ್ಕೆ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಿದೆ.

ಮುಂದಿನ 48 ಗಂಟೆಗಳಲ್ಲಿ ಕೇರಳ ಕರಾವಳಿಗೆ ಮುಂಗಾರು ಪ್ರವೇಶವಾಗಲಿದೆ. ಒಂದು ದಿನದ ಬಳಿಕ ರಾಜ್ಯಕ್ಕೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾನ್ಯವಾಗಿ ಜೂನ್‌ 1ಕ್ಕೆ ಐದು ದಿನ ಮುಂಚಿತವಾಗಿ ಅಥವಾ ನಂತರ ಮುಂಗಾರು ಪ್ರವೇಶವಾಗುತ್ತಿತ್ತು. ಈಗಾಗಲೇ ಬೆಂಗಳೂರು ನಗರ ಸೇರಿ

ದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಸುರಿಯುತ್ತಿದೆ. ಮೋಡ ಕಟ್ಟುವ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಿರುವುದೇ ಈ ರೀತಿ ಮಳೆ ಸುರಿಯಲು ಕಾರಣ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್‌ ಎಂ. ಮೇತ್ರಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry