‘ತೈಲ ಬೆಲೆ ಏರಿಕೆ ಖಂಡಿಸಿ ಜೂನ್‌ 18ರಿಂದ ಮುಷ್ಕರ’

7

‘ತೈಲ ಬೆಲೆ ಏರಿಕೆ ಖಂಡಿಸಿ ಜೂನ್‌ 18ರಿಂದ ಮುಷ್ಕರ’

Published:
Updated:

ಬೆಂಗಳೂರು: ಪೆಟ್ರೊಲ್‌ ಮತ್ತು ಡೀಸೆಲ್‌ ದರ ಏರಿಕೆ ಹಾಗೂ ವಾಹನಗಳ ‘ಥರ್ಡ್‌ ಪಾರ್ಟಿ’ ವಿಮೆ ಕಂತಿನ ದರ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರಕು– ಸಾಗಣೆ ವಾಹನಗಳ ಮಾಲೀಕರ ಸಂಘ ಜೂನ್‌ 18ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದೆ.

ಶುಕ್ರವಾರ ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘದ ಅಧ್ಯಕ್ಷ ಬಿ.ಚನ್ನಾರೆಡ್ಡಿ, ‘ ಥರ್ಡ್‌ ಪಾರ್ಟಿ’ ವಿಮೆ ಕಂತಿನ ದರವನ್ನು 2002ರಿಂದ ನಿರಂತರವಾಗಿ ಏರಿಕೆ ಮಾಡಲಾಗುತ್ತಿದೆ. ಅದು ತಡೆಯುವಂತೆ ಮಾಡಿದ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ’ ಎಂದರು.

‘ಲಾರಿ ಖರೀದಿಸಲು ಬ್ಯಾಂಕುಗಳಲ್ಲಿ ಮಾಡಿರುವ ಸಾಲ ಮರುಪಾವತಿಸಬೇಕು. ನಿತ್ಯವೂ ರಾಜ್ಯ, ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಲ್ಕ ಭರಿಸಬೇಕು. ಹೀಗೆ ಅನೇಕ ಸಮಸ್ಯೆಗಳನ್ನು ಲಾರಿ ಮಾಲೀಕರು ಅನುಭವಿಸುತ್ತಿದ್ದಾರೆ. ಸರ್ಕಾರ ಅವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಮಾಲೀಕರ ವಿರೋಧಿ ನಿರ್ಧಾರಗಳನ್ನು ಕೈಗೊಳುತ್ತಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry