ಗಾಣಿಗ ಸಮುದಾಯಕ್ಕೆ ಆದ್ಯತೆ ನೀಡಲು ಒತ್ತಾಯ

7

ಗಾಣಿಗ ಸಮುದಾಯಕ್ಕೆ ಆದ್ಯತೆ ನೀಡಲು ಒತ್ತಾಯ

Published:
Updated:

ಬೆಂಗಳೂರು: ಜೂನ್‌ನಲ್ಲಿ ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಗಾಣಿಗ ಸಮುದಾಯ ಮುಖಂಡ ಪಿ.ಎಂ.ರಘುನಾಥ್‌ ಅವರನ್ನು ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಬಿಜೆಪಿ ಕಣಕ್ಕಿಳಿಸಬೇಕು ಎಂದು ಅಖಿಲ ಕರ್ನಾಟಕ ಗಾಣಿಗರ ಒಕ್ಕೂಟ ಆಗ್ರಹಿಸಿದೆ.

‘ರಾಜ್ಯದಲ್ಲಿ ಗಾಣಿಗ ಸಮುದಾಯದವರು 25 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಜಕೀಯ ಪಕ್ಷಗಳು ಸಮುದಾಯಕ್ಕೆ ಸರಿಯಾದ ಪ್ರಾತಿನಿಧ್ಯ ನೀಡದೇ, ಸಮುದಾಯವನ್ನು ಕೇವಲ ವೋಟ್‌ಬ್ಯಾಂಕ್‌ ಆಗಿ ಬಳಸಿಕೊಳ್ಳುತ್ತಿವೆ’ ಎಂದು ಅಖಿಲ ಕರ್ನಾಟಕ ಗಾಣಿಗರ ಒಕ್ಕೂಟದ ಅಧ್ಯಕ್ಷ ಪಿ.ಜಿ.ವಿಜಯ್ ಕುಮಾರ್ ಇಲ್ಲಿ ಶುಕ್ರವಾರ ತಿಳಿಸಿದರು.

‘ರಾಜ್ಯದಲ್ಲಿ ರಾಸಾಯನಿಕ ಮಿಶ್ರಿತ ಎಣ್ಣೆಗಳನ್ನು ನಿಷೇಧಿಸಿ, ಗಾಣಿಗ ಸಮುದಾಯದವರು ತಯಾರಿಸಿದ ಎಣ್ಣೆಗಳನ್ನು ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಬೇಕು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry