'ಬಿಜೆಪಿ ಬ್ಲ್ಯಾಕ್ ಮೇಲ್ ಮಾಡಲು ಸಾಧ್ಯವಿಲ್ಲ'

7

'ಬಿಜೆಪಿ ಬ್ಲ್ಯಾಕ್ ಮೇಲ್ ಮಾಡಲು ಸಾಧ್ಯವಿಲ್ಲ'

Published:
Updated:

ಬೆಂಗಳೂರು: ‘ರೈತರ ಸಾಲ ಮನ್ನಾ ವಿಷಯದಲ್ಲಿ ಬಿಜೆಪಿ ಗಡುವು ವಿಧಿಸಲು ಸಾಧ್ಯವಿಲ್ಲ. ಬಹುಮತ ಸಾಬೀತು ವೇಳೆ ಸಭಾತ್ಯಾಗ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದೆ’ ಎಂದು ಶಾಸಕ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ‘ರೈತರು ಶಾಂತಿಯುತವಾಗಿ ವರ್ತಿಸಬೇಕು. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಆಗಲು ಅಡ್ಡಿಯಾಗಿದ್ದು, ಕಾಂಗ್ರೆಸ್ ಶಕ್ತಿಯೇ ಹೊರತು ನಾನು ಒಬ್ಬ ಅಲ್ಲ’ ಎಂದರು.

‘ಯಡಿಯೂರಪ್ಪ ಕೆಟ್ಟ ಸಂಸದೀಯ ವ್ಯವಹಾರ ಶುರು ಮಾಡಿದ್ದಾರೆ. ಬಂದ್ ಮಾಡುತ್ತೇವೆ ಎಂದು ಹೇಳುವ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಹೇಳಿದಂತೆ ಸರ್ಕಾರ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry