ಪ್ರಧಾನಿ ನರೇಂದ್ರ ಮೋದಿ ಸಿ.ಎಂ ಎಚ್‌ಡಿಕೆ ಭೇಟಿ ನಾಳೆ

7

ಪ್ರಧಾನಿ ನರೇಂದ್ರ ಮೋದಿ ಸಿ.ಎಂ ಎಚ್‌ಡಿಕೆ ಭೇಟಿ ನಾಳೆ

Published:
Updated:
ಪ್ರಧಾನಿ ನರೇಂದ್ರ ಮೋದಿ ಸಿ.ಎಂ ಎಚ್‌ಡಿಕೆ ಭೇಟಿ ನಾಳೆ

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸೋಮವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಭೇಟಿಗೆ ಸಮಯ ಕೋರಿ ಪ್ರಧಾನಿ ಕಚೇರಿಗೆ ಕುಮಾರಸ್ವಾಮಿ ಪತ್ರ ಬರೆದಿದ್ದರು. ಸೋಮವಾರ ಬರುವಂತೆ ಪ್ರಧಾನಿ ಕಚೇರಿಯಿಂದ ಸೂಚನೆ ಬಂದಿದೆ. ಸಮಯ ಇನ್ನಷ್ಟೇ ನಿಗದಿಯಾಗಬೇಕಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಕುಮಾರಸ್ವಾಮಿ ಅವರು ಇಂಧನ ಸಚಿವ ಪೀಯೂಷ್ ಗೋಯಲ್ ಅವರಿಗೂ ಪತ್ರ ಬರೆದು ಭೇಟಿಗೆ ಸಮಯ ಕೋರಿದ್ದಾರೆ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇದ್ದು ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಹೆಚ್ಚಿನ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆ ಹಾಗೂ ಕಲ್ಲಿದ್ದಲು ಗಣಿ ಹಂಚಿಕೆ ಮಾಡುವಂತೆ ಗೋಯಲ್  ಭೇಟಿಯ ವೇಳೆ ಮುಖ್ಯಮಂತ್ರಿ ಮನವಿ ಮಾಡಲಿದ್ದಾರೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry