‘ಜೆಡಿಎಸ್‌ ಕಾರ್ಯಕರ್ತರಿಗೆ ಹೊಡೆಯಿರಿ’

7

‘ಜೆಡಿಎಸ್‌ ಕಾರ್ಯಕರ್ತರಿಗೆ ಹೊಡೆಯಿರಿ’

Published:
Updated:

ಪಿರಿಯಾಪಟ್ಟಣ: ‘ಜೆಡಿಎಸ್ ಕಾರ್ಯಕರ್ತರನ್ನು ಹುಚ್ಚು ನಾಯಿಗೆ ಹೊಡೆಯುವಂತೆ ಅಟ್ಟಾಡಿಸಿ ಹೊಡೆಯಿರಿ, ನಿಮ್ಮ ರಕ್ಷಣೆಗೆ ನಾನು ಇದ್ದೇನೆ’ ಎಂದು ಮಾಜಿ ಶಾಸಕ ಕೆ.ವೆಂಕಟೇಶ್‌ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರೆ ಕೊಟ್ಟಿರುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪಟ್ಟಣದಲ್ಲಿ ಈಚೆಗೆ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.

‘ವೆಂಕಟೇಶ್‌ ಹೇಳಿಕೆಯಿಂದ ಜೆಡಿಎಸ್‌ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಸುಮ್ಮನಿದ್ದಾರೆ. ಇಂಥ ಹೇಳಿಕೆ ನೀಡುವುದು ಸರಿಯಲ್ಲ’ ಎಂದು ಜೆಡಿಎಸ್ ಮುಖಂಡ ಎಸ್.ರಾಮು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry