ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

7

ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

Published:
Updated:

ಬಾಗಲಕೋಟೆ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶನಿವಾರ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ನಗರದ ಶಿವಾನಂದ ಜಿನ್ನಿಂಗ್ ಆವರಣದಲ್ಲಿರುವ ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿದ ಪಕ್ಷದ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ವಿತರಿಸಿದರು. ಫಿರ್ ಏಕ್ ಬಾರ್ ಮೋದಿ ಸರ್ಕಾರ ಎಂದು ಘೋಷಣೆ ಕೂಗಿದರು. ಮೋದಿ, ಯಡಿಯೂರಪ್ಪ ಹಾಗೂ ಶಾಸಕ ವೀರಣ್ಣ ಚರಂತಿಮಠ ಪರವಾಗಿ ಜೈಕಾರ ಹಾಕಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ ಮಾತನಾಡಿ, ‘ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಯಾದಾಗಿನಿಂದ ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ. ದೇಶದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರ ಯೋಜನೆಗಳು ತಲುಪುವಂತೆ ಮಾಡಿದ್ದಾರೆ’ ಎಂದರು.

‘ಮೋದಿ ಅವರು ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಯಾವುದೇ ರೀತಿಯ ಕಪ್ಪುಚುಕ್ಕೆ ಇಲ್ಲದೇ ಪಾರದರ್ಶಕವಾದ ಆಡಳಿತ ನೀಡಿದ್ದಾರೆ. ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಮಾಡಿದ್ದಾರೆ. ಹೀಗಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷ ದ್ಯಾವಪ್ಪ ರಾಕುಂಪಿ, ಸದಸ್ಯ ರಾಜು ಬಳೂಲಮಠ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಸವರಾಜ ಯಂಕಂಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ರೇವಣಕರ, ಬಸಲಿಂಗಪ್ಪ ನಾವಲಗಿ, ಬಸವರಾಜ ನಾಶಿ, ಬಸವರಾಜ ಅವರಾದಿ, ಸುರೇಶ ಕೊಣ್ಣೂರ, ಪಾಲಾಕ್ಷಿ ಕಟ್ಟಿಮಠ, ಚನ್ನಪ್ಪ ಮಾಚಕನೂರ, ಚಂದ್ರು ಸರೂರ, ಮಾರುತಿ ದಳವಾಯಿ, ಮಾಲಿಂಗ ವಡ್ಡರ, ನಾಗರಾಜ ಕಟ್ಟಿಮನಿ, ಜ್ಯೋತಿ ಭಜಂತ್ರಿ, ಸವಿತಾ ಲೆಂಕಣ್ಣವರ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry