ಟಾಸ್‌ಗೆದ್ದ ದೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌: ಫೀಲ್ಡಿಂಗ್ ಆಯ್ಕೆ

7

ಟಾಸ್‌ಗೆದ್ದ ದೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌: ಫೀಲ್ಡಿಂಗ್ ಆಯ್ಕೆ

Published:
Updated:
ಟಾಸ್‌ಗೆದ್ದ ದೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌: ಫೀಲ್ಡಿಂಗ್ ಆಯ್ಕೆ

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ಐಪಿಎಲ್‌ 2018 ಗ್ರಾಂಡ್ ಫೈನಲ್‌ನಲ್ಲಿ ‘ಕ್ಯಾಪ್ಟನ್ ಕೂಲ್’ ಮಹೇಂದ್ರಸಿಂಗ್ ದೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಟಾಸ್‌ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಸನ್‌ರೈಸರ್ಸ್‌ ಹೈದರಾಬಾದ್‌ ತಂಡ 1 ವಿಕೆಟ್ ನಷ್ಟಕ್ಕೆ 17 ರನ್ ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ. 

ಮೇ 22ರಂದು ಇದೇ ಅಂಗಳದಲ್ಲಿ ನಡೆದಿದ್ದ ಮೊದಲ ಕ್ವಾಲಿಫೈಯರ್‌ ಪೈಪೋಟಿಯಲ್ಲಿ ಉಭಯ ತಂಡಗಳು ಎದುರಾಗಿದ್ದವು. ಆಗ ದೋನಿ ಬಳಗವು  2 ವಿಕೆಟ್‌ಗಳ ರೋಚಕ ಜಯ ದಾಖಲಿಸಿ ಫೈನಲ್ ಪ್ರವೇಶಿಸಿತ್ತು. 

ವಿಲಿಯಮ್ಸನ್‌ ಬಳಗವು ಶುಕ್ರವಾರ ಈಡನ್‌ ಗಾರ್ಡನ್ಸ್‌ ಅಂಗಳದಲ್ಲಿ ನಡೆದಿದ್ದ ಎರಡನೇ ಕ್ವಾಲಿಫೈಯರ್‌ನಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್‌ ವಿರುದ್ಧ 14ರನ್‌ಗಳಿಂದ ಗೆದ್ದು ಫೈನಲ್‌ ಪ್ರವೇಶಿಸಿತ್ತು.

ಕಠಿಣ ತಾಲೀಮು ನಡೆಸಿರುವ ದೋನಿ ಪಡೆ ಈಗ ಮೂರನೇ ಪ್ರಶಸ್ತಿಗೆ ಮುತ್ತಿಕ್ಕುವ ಉತ್ಸಾಹದಲ್ಲಿದ್ದು,  ಈ ಬಾರಿ ಸೂಪರ್‌ ಕಿಂಗ್ಸ್‌ ವಿರುದ್ಧ ಆಡಿದ ಮೂರೂ ಪಂದ್ಯಗಳಲ್ಲಿ ನಿರಾಸೆ ಕಂಡಿದ್ದ ಸನ್‌ರೈಸರ್ಸ್‌ ತಂಡ ಮುಯ್ಯಿ ತೀರಿಸಿಕೊಳ್ಳಲು ಹವಣಿಸುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry