2019ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದು

7

2019ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದು

Published:
Updated:
2019ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದು

ವಿಜಯವಾಡ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ಮಾಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ‘ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿರುವ ಅವರು ಪ್ರಚಾರಪ್ರಿಯ ಪ್ರಧಾನಿ’ ಎಂದಿದ್ದಾರೆ. ಅಲ್ಲದೆ, ‘2019ರಲ್ಲಿ ಬಿಜೆಪಿ ಖಂಡಿತ ಅಧಿಕಾರಕ್ಕೆ ಬರುವುದಿಲ್ಲ’ ಎಂದು ಭವಿಷ್ಯ ನುಡಿದಿದ್ದಾರೆ.

ಪಕ್ಷದ ವಾರ್ಷಿಕ ಸಮಾವೇಶ ‘ಮಹಾನಾಡು’ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಹಿಂದೆ ಹಲವಾರು ಸರ್ಕಾರಗಳನ್ನು ರಚಿಸುವಲ್ಲಿ ಪಕ್ಷ ಪ್ರಮುಖ ಪಾತ್ರ ವಹಿಸಿದೆ. ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸುವ ಶಕ್ತಿಯೂ ಪಕ್ಷಕ್ಕಿದೆ’ ಎಂದು ಹೇಳುವ ಮೂಲಕ 2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ತಡೆಯೊಡ್ಡಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸುವ ಸುಳಿವು ನೀಡಿದರು.

‘ಕಾಂಗ್ರೆಸ್‌ ಈಗ ವಿರೋಧ ಪಕ್ಷದಲ್ಲಿದ್ದು, ಅದು ಹೇಳಿಕೊಳ್ಳುವಂತಹ ಸಾಧನೆ ಮಾಡದು. ಆದರೆ, 2019ರಲ್ಲಿ ಬಿಜೆಪಿ ಮಾತ್ರ ಖಂಡಿತ ಅಧಿಕಾರಕ್ಕೆ ಬರದು’ ಎಂದು ಹೇಳಿದರು.

ವೈಎಸ್‌ಆರ್ ಕಾಂಗ್ರೆಸ್‌ನೊಂದಿಗೆ ಕೈಜೋಡಿಸಿರುವ ಬಿಜೆಪಿ ರಾಜ್ಯದಲ್ಲಿ ಕಾನೂನು–ಸುವ್ಯವಸ್ಥೆ ಹದಗೆಡಿಸಲು ಯತ್ನಿಸುತ್ತಿದೆ ಎಂದೂ ಟೀಕಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry