ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಡಿಸಿಎಂ: ಶಾಮನೂರುಗಿಂತ ಎಂ.ಬಿ.ಪಾಟೀಲ ಅರ್ಹ’

Last Updated 27 ಮೇ 2018, 19:30 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಲಿಂಗಾಯತರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಅಗತ್ಯವಿದೆ. ಈ ಹುದ್ದೆಗೆ ಶಾಮನೂರು ಶಿವಶಂಕರಪ್ಪ ಅವರಿಗಿಂತ ಎಂ.ಬಿ. ಪಾಟೀಲ ಅರ್ಹರು’ ಎಂದು ಮಾತೆ ಮಹಾದೇವಿ ಅಭಿಪ್ರಾಯಪಟ್ಟರು.

ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ. ಚಟುವಟಿಕೆಯಿಂದ ಕೆಲಸ ಮಾಡುವ ಮಧ್ಯ ವಯಸ್ಕರಿಗೆ ಈ ಹುದ್ದೆ ನೀಡುವುದು ಸೂಕ್ತ. ಎಂ.ಬಿ. ಪಾಟೀಲ ಈ ಹುದ್ದೆಗೆ ಸಮರ್ಥರು ಹಾಗೂ ಕ್ರಿಯಾಶೀಲರಾಗಿ ಕೆಲಸ ಮಾಡಬಲ್ಲರು. ಅರ್ಹರನ್ನು ಅಧಿಕಾರಕ್ಕೆ ತಂದರೆ ಕೆಲಸಗಳಾಗುತ್ತವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಲಿಂಗಾಯತ ಧರ್ಮದ ಹೋರಾಟವನ್ನು ಬೆಂಬಲಿಸಿದ್ದರಿಂದ ಕಾಂಗ್ರೆಸ್‌ಗೆ 78 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ. ವಿನಯ ಕುಲಕರ್ಣಿ ಹಾಗೂ ಶರಣಪ್ರಕಾಶ ಪಾಟೀಲ ಅವರ ಸೋಲಿನ ಹಿಂದೆ ಕೆಲವರ ಕೈವಾಡವಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT