ಮುಖ್ಯಮಂತ್ರಿ ದೆಹಲಿಗೆ ಇಂದು

7

ಮುಖ್ಯಮಂತ್ರಿ ದೆಹಲಿಗೆ ಇಂದು

Published:
Updated:

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಂಧನ ಸಚಿವ ಪೀಯೂಷ್‌ ಗೋಯಲ್‌ ಅವರನ್ನು ಸೋಮವಾರ ಭೇಟಿ ಮಾಡಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ದೆಹಲಿಗೆ ಹೋಗಲಿರುವ ಕುಮಾರಸ್ವಾಮಿ, ಮಧ್ಯಾಹ್ನ 3.30ಕ್ಕೆ ರಾಜ್‌ಘಾಟ್‌ಗೆ ತೆರಳಿ ಮಹಾತ್ಮಾಗಾಂಧಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವರು.

5.30ಕ್ಕೆ ಮೋದಿ ಮತ್ತು ಗೋಯಲ್‌ ಅವರನ್ನು ಭೇಟಿ ಮಾಡಲಿದ್ದಾರೆ. ರಾತ್ರಿ 8.30ಕ್ಕೆ ದೆಹಲಿಯಿಂದ ವಾಪಸು ಬರಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry