ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ, ಕೊಲೆ ಅಪರಾಧಿಗೆ ಗಲ್ಲು: ಜಾರಿಗೆ ‘ಸುಪ್ರೀಂ’ ತಡೆ

Last Updated 27 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಮಧ್ಯಪ್ರದೇಶದಲ್ಲಿ ಕಳೆದ ವರ್ಷ ನಡೆದಿದ್ದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜಾರಿ ಮಾಡದಂತೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ.

ಈ ಪ್ರಕರಣದಲ್ಲಿ ತನಗೆ ಗಲ್ಲು ಶಿಕ್ಷೆ ವಿಧಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದ ಮಧ್ಯಪ್ರದೇಶ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ, ಅಪರಾಧಿ ಭಗವಾನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಹಾಗೂ ಇಂದೂ ಮಲ್ಹೋತ್ರ ಅವರನ್ನು ಒಳಗೊಂಡ ಪೀಠ, ಈ ಸಂಬಂಧ ಮಧ್ಯಪ್ರದೇಶ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ‘ಅರ್ಜಿದಾರ ಭಗವಾನಿಗೆ ಗಲ್ಲು ಶಿಕ್ಷೆ ವಿಧಿಸಿ ನೀಡಿದ ತೀರ್ಪಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿರುವ ಮೂಲ ದಾಖಲೆಗಳನ್ನು ಹಾಜರುಪಡಿಸುವಂತೆ’ ಪೀಠ ಹೇಳಿದೆ.

ಈ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾದ ಕಾರಣ ಮತ್ತೊಬ್ಬ ಅಪರಾಧಿ ಸತೀಶ್‌ ಎಂಬಾತನಿಗೂ ಅಧೀನ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದ್ದನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT