ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರವ್‌ ಮೋದಿ ಆಸ್ತಿ ಜಪ್ತಿಗೆ ಮುಂದಾದ ಇ.ಡಿ

Last Updated 27 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ವಜ್ರದ ವ್ಯಾಪಾರಿ ನೀರವ್‌ ಮೋದಿ ಅವರ ಸುಮಾರು ₹7ಸಾವಿರ ಕೋಟಿ ಆಸ್ತಿಯನ್ನು ತಕ್ಷಣವೇ ಜಪ್ತಿ ಮಾಡಿಕೊಳ್ಳಲು ಅನುಮತಿ ನೀಡುವಂತೆ ಜಾರಿ ನಿರ್ದೇಶನಾಲಯ, ಮುಂಬೈ ವಿಶೇಷ ನ್ಯಾಯಾಲಯವನ್ನು ಕೋರಲು ಮುಂದಾಗಿದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮಕೈಗೊಳ್ಳಲಾಗುತ್ತಿದೆ.

ವಂಚನೆಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದಲ್ಲಿ ಕಳೆದ ವಾರ 12 ಸಾವಿರ ‍ಪುಟಗಳ ಆರೋಪಪಟ್ಟಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಈ ಬಗ್ಗೆ ಸೋಮವಾರ ವಿಚಾರಣೆ ನಡೆಯಲಿದೆ.

ಆಗ ನೀರವ್‌ ಮೋದಿ ಅವರ ಭಾರತ ಮತ್ತು ವಿದೇಶದಲ್ಲಿನ ಆಸ್ತಿಯನ್ನು ಜಪ್ತಿ ಮಾಡಿಕೊಳ್ಳಲು ಅನುಮತಿ ನೀಡುವಂತೆ ಜಾರಿ ನಿರ್ದೇಶನಾಲಯದ ವಕೀಲರು ಕೋರಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT