ಇಂದಿರಾ ಕ್ಯಾಂಟೀನ್ ಗಾಜು ಪುಡಿ

7

ಇಂದಿರಾ ಕ್ಯಾಂಟೀನ್ ಗಾಜು ಪುಡಿ

Published:
Updated:
ಇಂದಿರಾ ಕ್ಯಾಂಟೀನ್ ಗಾಜು ಪುಡಿ

ಚಿತ್ರದುರ್ಗ: ಇಲ್ಲಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಸಮೀಪದ ಯೂನಿಯನ್ ಪಾರ್ಕ್ ನಲ್ಲಿ ಇರುವ ಇಂದಿರಾ ಕ್ಯಾಂಟೀನ್ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು ಗಾಜು ಪುಡಿಗೊಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಂಜುನಾಥ್, ರವಿ ಹಾಗೂ ಶಂಭು ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುಮಾರು 40 ಜನರ ಗುಂಪು ಬೆಳಿಗ್ಗೆ 9.15ರ ಸುಮಾರಿಗೆ ಕ್ಯಾಂಟಿನ್ ಗೆ ನುಗ್ಗಿದ್ದಾರೆ. ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗುತ್ತಾ ಕಲ್ಲು ತೂರಾಟ ನಡೆಸಿದ್ದಾರೆ. ಕ್ಯಾಂಟೀನ್ ಪ್ರವೇಶ ದ್ವಾರದ ಗಾಜು ಪುಡಿಯಾಗಿದೆ.

ಕ್ಯಾಂಟೀನ್ ಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಕ್ಯಾಂಟೀನ್ ಕಾರ್ಯನಿರ್ವಹಿಸುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry