ಇಬ್ಬರು ಮಹಿಳೆಯರು ಸೇರಿ ಮೂವರು ಕಳ್ಳರ ಬಂಧನ

7

ಇಬ್ಬರು ಮಹಿಳೆಯರು ಸೇರಿ ಮೂವರು ಕಳ್ಳರ ಬಂಧನ

Published:
Updated:

ಕಲಬುರ್ಗಿ: ನಗರದ ವಿವಿಧ ಬಡಾವಣೆಗಳಲ್ಲಿನ ಮನೆಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಮೂವರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಬಾಪು ನಗರದ ಜಯಸೂರ್ಯ, ಸೊಲ್ಲಾಪುರದ ಸಂಗೀತಾ, ಶಾಂತಾ ಬಂಧಿತರು. ಇವರಿಂದ 380 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಬ್ರಹ್ಮಪುರ ಮತ್ತು ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇವರು ಕಳವು ಮಾಡಿದ್ದರು.

ಈ ಕುರಿತು ಬ್ರಹ್ಮಪುರ, ರಾಘವೇಂದ್ರ ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry