ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ಆರಂಭ ಇಂದು: ಪಠ್ಯಪುಸ್ತಕ ವಿತರಣೆಗೆ ಕ್ರಮ

ಶೇ 80ರಷ್ಟು ಪಠ್ಯಪುಸ್ತಕ ಪೂರೈಕೆ: ಡಿಡಿಪಿಐ ಅಂಥೋಣಿ ಹೇಳಿಕೆ
Last Updated 28 ಮೇ 2018, 10:44 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸಲು ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಇಲಾಖೆಯಿಂದ ಶೇ 80ರಷ್ಟು ಪೂರೈಕೆಯಾಗಿದೆ' ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂಥೋಣಿ ಮಾಹಿತಿ ನೀಡಿದರು.

‘ಜಿಲ್ಲೆಯಿಂದ 17,01,404 ಪಠ್ಯ ಪುಸ್ತಕ ಬೇಡಿಕೆ ಸಲ್ಲಿಸಲಾಗಿತ್ತು. 13,71,004 ಪಠ್ಯ ಪುಸ್ತಕ ಪೂರೈಕೆಯಾಗಿದೆ. ಇನ್ನೂ 3,30,400 ಪಠ್ಯಪುಸ್ತಕ ಬರಬೇಕಾಗಿದೆ. ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲೆಂದು 4,46,178 ಪಠ್ಯಪುಸ್ತಕ ಬೇಡಿಕೆ ಸಲ್ಲಿಸಲಾಗಿತ್ತು. 3,48,956 ಪಠ್ಯಪುಸ್ತಕ ಬಂದಿವೆ. ಇನ್ನೂ 97,222 ಪಠ್ಯ ಪುಸ್ತಕ ಬರಬೇಕಾಗಿದೆ’ ಎನ್ನುತ್ತಾರೆ ಅವರು.

‘ಉಚಿತ ಸಮವಸ್ತ್ರ ವಿತರಣೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 1, 2ನೇ ತರಗತಿಯ 29,405 ವಿದ್ಯಾರ್ಥಿಗಳಿಗೆ, 3 ಮತ್ತು 4ನೇ ತರಗತಿಯ 33,245 ವಿದ್ಯಾರ್ಥಿಗಳಿಗೆ, 5 ರಿಂದ 7ನೇ ತರಗತಿಯ 46,143 ವಿದ್ಯಾರ್ಥಿಗಳಿಗೆ ಹಾಗೂ 8 ರಿಂದ 10ನೇ ತರಗತಿಯ ಬಾಲಕರಿಗೆ 10,949 ಸಮವಸ್ತ್ರ ಬಂದಿವೆ. ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಒಂದು ವಾರದೊಳಗೆ ಸರಬರಾಜಾಗುವ ನಿರೀಕ್ಷೆ ಇದೆ. ಜಿಲ್ಲೆಯಾದ್ಯಂತ ಒಟ್ಟು 1,19,742 ವಿದ್ಯಾರ್ಥಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

‘ತಾಲ್ಲೂಕುವಾರು ಆಯಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಎಲ್ಲ ಶಾಲೆಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ. ಅದಕ್ಕಾಗಿ ಆ ವ್ಯಾಪ್ತಿಯ ಶಾಲೆಗಳ ಮುಖ್ಯ ಶಿಕ್ಷಕರನ್ನು ಕರೆಯಿಸಿ ಮೇ 28 ರೊಳಗೆ ರವಾನಿಸಲಾಗುವುದು. ನಂತರ ವಿದ್ಯಾರ್ಥಿಗಳಿಗೆ ಹಂಚಲಾಗುವುದು’ ಎಂದು ತಿಳಿಸಿದರು.

‘ಬಿಆರ್‌ಪಿ ಮತ್ತು ಸಿಆರ್‌ಪಿ ಮೂಲಕ ಪಠ್ಯಪುಸ್ತಕ ವಿತರಣೆ ಮಾಡಲಾಗುತ್ತಿದೆ. ಅದಕ್ಕೆಂದು ಇಲಾಖೆಯಿಂದ ಟ್ರಕ್ ಬಾಡಿಗೆ ಆಧಾರದಲ್ಲಿ ನಿಗದಿ ಮಾಡಿಕೊಂಡಿದ್ದು, ಪ್ರತಿ ದಿನ ಒಂದು ವಲಯಕ್ಕೆ ಪಠ್ಯಪುಸ್ತಕ ವಿತರಣೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಶುಲ್ಕ ಪಡೆಯುವುದಿಲ್ಲ. ಅನುದಾನ ರಹಿತ ಶಾಲೆಗಳಲ್ಲಿ ಮಾತ್ರ ಪಡೆಯಲಾಗುವುದು’ ಎಂದರು.

ಕನ್ನಡ, ಆಂಗ್ಲ, ಉರ್ದು ಮತ್ತು ಒಂದು ಸಂಸ್ಕೃತ ಮಾಧ್ಯಮ ಶಾಲೆಗಳಿಗೆ ವಿತರಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಸ್ವತಃ ನಾನೇ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಅವರು ‘ಪ್ರಜಾವಾಣಿ’ಗೆ
ತಿಳಿಸಿದರು.

ಖಾಸಗಿ ಶಾಲೆಗೂ ಪಠ್ಯ ಪುಸ್ತಕ ವಿತರಣೆ

ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ 68,538 ವಿದ್ಯಾರ್ಥಿಗಳಿದ್ದಾರೆ. ಅದರಲ್ಲಿ 39,003 ಬಾಲಕರು, 29,535 ಬಾಲಕಿಯರು ಇದ್ದು, ಅವರೆಲ್ಲರಿಗೆ ಸರ್ಕಾರದಿಂದ ಮಾರಾಟ ಪಠ್ಯ ಪುಸ್ತಕಗಳನ್ನು ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಂಥೋಣಿ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ 5592 ವಿದ್ಯಾರ್ಥಿಗಳಿದ್ದಾರೆ. ಅದರಲ್ಲಿ 2373 ಬಾಲಕರು, 3219 ಬಾಲಕಿಯರು ಇದ್ದು, ಈ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಾರಾಟ ಪಠ್ಯಪುಸ್ತಕಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

**
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಇಲಾಖೆಯ ಯೋಜನೆಯಂತೆ ಉಚಿತವಾಗಿ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ನಡೆಯುತ್ತಿದೆ 
ಅಂಥೋಣಿ, ಡಿಡಿಪಿಐ

ಬೋರೇಶ ಎಂ.ಜೆ. ಬಚ್ಚಬೋರನಹಟ್ಟಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT