ಕೆಪಿಎಸ್‌ಸಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

7

ಕೆಪಿಎಸ್‌ಸಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Published:
Updated:

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿನ ಇತಿಹಾಸ, ಜೀವವಿಜ್ಞಾನ ಮತ್ತು ಗಣಿತ ವಿಷಯದ ಉಪನ್ಯಾಸಕ ಹಾಗೂ ಆಯುಷ್ ಇಲಾಖೆಯ ಆಯುಷ್ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಪ್ರಾಧ್ಯಾಪಕ (ಆಯುರ್ವೇದ – ಶಲ್ಯತಂತ್ರ) ಹುದ್ದೆಗಳಿಗೆ ಆಯ್ಕೆಯಾದವರ ತಾತ್ಕಾಲಿಕ ಪಟ್ಟಿಯನ್ನು ಕೆಪಿಎಸ್‌ಸಿ ಪ್ರಕಟಿಸಿದೆ.

ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ನಲ್ಲಿ (http://kpsc.kar.nic.in/Selection List) ಪಟ್ಟಿಯನ್ನು ನೋಡಬಹುದು. ಆಕ್ಷೇಪಣೆ ಸಲ್ಲಿಸುವವರು ಇದೇ 30ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು- 560 001 ಇಲ್ಲಿಗೆ ಸಲ್ಲಿಸಬಹುದು ಎಂದು

ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry