ವಿದ್ಯಾರ್ಥಿಗಳು ಪಾರು

7

ವಿದ್ಯಾರ್ಥಿಗಳು ಪಾರು

Published:
Updated:

ಬೆಂಗಳೂರು: ಶಾಲಾ ವಾಹನಕ್ಕೆ ಎಸ್‌ಯುವಿ ಡಿಕ್ಕಿ ಹೊಡೆದಿದ್ದರಿಂದ ಹತ್ತು ವಿದ್ಯಾರ್ಥಿಗಳು ಆಶ್ಚರ್ಯಕರ ರೀತಿಯಲ್ಲಿ ಪಾರಾದ ಪ್ರಕರಣ ಅನೇಕಲ್‌ ತಾಲ್ಲೂಕಿನ ವಿ. ಕಲ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಕುಡ್ಲು ಬಳಿಯ ಸದ್ಗುರು ಶಾಂತಿನಾಥ ಇಂಟರ್‌ ನ್ಯಾಷನಲ್‌ ಶಾಲೆಗೆ ಸೇರಿದ ಶಾಲಾ ವಾಹನ ಮಕ್ಕಳನ್ನು ಹತ್ತಿಸಿಕೊಳ್ಳಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಶಾಲಾ ವಾಹನ ಸರ್ಜಾಪುರ ರಸ್ತೆಯಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದಿದೆ’ ಎಂದು ಅವರು ಹೇಳಿದ್ದಾರೆ.

‘ಘಟನೆ ನಡೆದ ತಕ್ಷಣ ಸ್ಥಳೀಯರು ಧಾವಿಸಿ, ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಗಾಯಗೊಂಡಿದ್ದ ಎಸ್‌ಯುವಿ ಚಾಲಕ ಪರಾರಿಯಾಗಿದ್ದಾನೆ‘ ಎಂದು ಅವರು ಹೇಳಿದ್ದಾರೆ. ಅನೇಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry