ಹೊಸಕೋಟೆ: ಬಿಜೆಪಿ ಆತ್ಮಾವಲೋಕನ ಸಭೆ

7

ಹೊಸಕೋಟೆ: ಬಿಜೆಪಿ ಆತ್ಮಾವಲೋಕನ ಸಭೆ

Published:
Updated:
ಹೊಸಕೋಟೆ: ಬಿಜೆಪಿ ಆತ್ಮಾವಲೋಕನ ಸಭೆ

ಹೊಸಕೋಟೆ: ‘ಹಾವು ಮುಂಗುಸಿಗಳಂತಿದ್ದ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದು ಈ ಸರ್ಕಾರಕ್ಕೆ ಭವಿಷ್ಯವಿಲ್ಲ’ ಎಂದು ಬಿಜೆಪಿ ಮುಖಂಡ ಬಿ.ಎನ್.ಬಚ್ಚೇಗೌಡ ಹೇಳಿದರು.

ಸೋಮವಾರ ಇಲ್ಲಿ ಪಕ್ಷ ಆಯೋಜಿಸಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಅಭ್ಯರ್ಥಿಯಾಗಿದ್ದ ಶರತ್ ಬಚ್ಚೇಗೌಡ, ‘ಅನಿರೀಕ್ಷಿತ ಫಲಿತಾಂಶದಿಂದ ಕಾರ್ಯಕರ್ತರು ಎದೆಗುಂದಬೇಕಿಲ್ಲ. ನಾನು ನಿಮ್ಮ ಜೊತೆಗಿದ್ದು ನಿಮ್ಮ ಕಷ್ಟ ಸುಖಗಳಿಗೆ ಸ್ಪಂದಿಸುತ್ತೇನೆ’ ಎಂದು ಹೇಳಿದರು.

ನಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡು ಕೆಳಮಟ್ಟದಿಂದ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಿ ಪಕ್ಷ ಬೆಳೆಸಲು ಮುಂದಾಗೋಣ ಎಂದರು.

ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಮಂಜುನಾಥ್ ಇದ್ದರು. ಮೈತ್ರಿ ಸರ್ಕಾರ ರೈತರ ಸಮಸ್ಯೆಗಳಿಗೆಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.

ಪ್ರತಿಭಟನೆ: ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತು ತಪ್ಪಿದ್ದಾರೆ ಎಂದು ಆರೋಪಿಸಿ ಕಾರ್ಯಕರ್ತರು ಸಭಾಂಗಣದ ಹೊರಗೆ ಕಪ್ಪು ಪಟ್ಟಿ ಧರಿಸಿಪ್ರತಿಭಟಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry