7

ಅರಬ್ಬಿ ಸಮುದ್ರದಲ್ಲಿ ಎರಡು ದೋಣಿಗಳು ಭಾಗಶಃ ಮುಳುಗಡೆ

Published:
Updated:
ಅರಬ್ಬಿ ಸಮುದ್ರದಲ್ಲಿ ಎರಡು ದೋಣಿಗಳು ಭಾಗಶಃ ಮುಳುಗಡೆ

ಕಾರವಾರ: ಮೀನುಗಾರಿಕೆ ನಡೆಸಿ ತಮಿಳುನಾಡಿಗೆ ಮಂಗಳವಾರ ವಾಪಸಾಗುತ್ತಿದ್ದ ಎರಡು ಮೀನುಗಾರಿಕಾ ದೋಣಿಗಳು ಕಡಲ ಕಿನಾರೆಯಿಂದ ಸುಮಾರು 21 ನಾಟಿಕಲ್ ಮೈಲು (ಸುಮಾರು 39 ಕಿ.ಮೀ) ದೂರದಲ್ಲಿ ಅರಬ್ಬಿ ಸಮುದ್ರದಲ್ಲಿ ಭಾಗಶಃ ಮುಳುಗಡೆಯಾಗಿವೆ.

ದೋಣಿಗಳನ್ನು ತಮಿಳುನಾಡಿನ ಮೀನುಗಾರರಿಗೆ ಸೇರಿದ ‘ಏಂಜೆಲ್ 1’ ಮತ್ತು ‘ಏಂಜೆಲ್ 2’ ಎಂದು ಗುರುತಿಸಲಾಗಿದೆ. ಅವುಗಳಲ್ಲಿ 20ಕ್ಕೂ ಹೆಚ್ಚು ಮೀನುಗಾರರು ಇದ್ದಿರಬಹುದು. ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಗಳಿಗೆ ಹಾನಿಯಾಗಿರುವ ಕಾರಣ ಅವಘಡ ನಡೆದಿರಬಹುದು ಎಂದು ಸ್ಥಳೀಯರು ಹೇಳಿದ್ದಾರೆ.

ಈ ಬಗ್ಗೆ ‘ಪ್ರಜಾವಾಣಿ’ ಜತೆ ಮಾತನಾಡಿದ ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕ ಸಂತೋಷ್ ಕೊಪ್ಪದ, ‘ದೋಣಿಗಳು ಭಾಗಶಃ ಮುಳುಗಿರುವ ಬಗ್ಗೆ ಮಾಹಿತಿ ದೊರೆತಿದೆ. ತಕ್ಷಣ ಕರಾವಳಿ ರಕ್ಷಣಾ ಪಡೆಯವರಿಗೆ ಮಾಹಿತಿ ನೀಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸ್ಥಳೀಯ ಮೀನುಗಾರರೂ ಸಂಕಷ್ಟದಲ್ಲಿರುವವರ ರಕ್ಷಣೆಗೆ ಧಾವಿಸಿದ್ದಾರೆ. ಸಂಪೂರ್ಣ ಮಾಹಿತಿ ಇನ್ನಷ್ಟೇ ಸಿಗಬೇಕಿದೆ’ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry