ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ ಜನರಿಗೆ ಆರೋಗ್ಯ ಯೋಜನೆ ಸಂಪುಟ ಸಭೆಯಲ್ಲಿ ತೀರ್ಮಾನ

Last Updated 29 ಮೇ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬಡ ಜನರಿಗಾಗಿ ಉತ್ತಮ ಆರೋಗ್ಯ ಯೋಜನೆ ಜಾರಿ ತರಲು ಬುಧವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಈ ಸಂಬಂಧ ಮಂಗಳವಾರ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಯಶಸ್ವಿನಿ ಮತ್ತು ಇತ್ತೀಚೆಗೆ ಜಾರಿಗೊಳಿಸಿದ ‘ಆರೋಗ್ಯ ಕರ್ನಾಟಕ’ ಯೋಜನೆ ಕುರಿತು ಮಾಹಿತಿ ಪಡೆದರು.

‘ಯಶಸ್ವಿನಿ’ ಆರೋಗ್ಯ ಯೋಜನೆಯನ್ನು ಮುಂದುವರಿಸುವ ಬಗ್ಗೆ ಸಭೆಯಲ್ಲಿ ಒಲವು ವ್ಯಕ್ತಪಡಿಸಿದ ಕುಮಾರಸ್ವಾಮಿ, ಬಡವರಿಗೆ ಹೆಚ್ಚು ಅನುಕೂಲ ಒದಗಿಸಲು ಎಲ್ಲ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಮಗ್ರ ಮಾಹಿತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಯ್‌ ಸೇಠ್‌ ಅವರಿಗೆ ಮುಖ್ಯಮಂತ್ರಿ ಸೂಚಿಸಿದರು.

‘ಆರೋಗ್ಯ ಕರ್ನಾಟಕ’ ಯೋಜನೆಯನ್ನು ಹಿಂದಿನ ಸರ್ಕಾರ ಚುನಾವಣೆಗೆ ಮೊದಲು ಜಾರಿಗೆ ತಂದಿತ್ತು. ಬಡ ಜನರಿಗಾಗಿ ಉತ್ತಮ ಗುಣಮಟ್ಟದ ಆರೋಗ್ಯ ಯೋಜನೆ ಜಾರಿಗೊಳಿಸುವ ಉದ್ದೇಶದಿಂದ ಅಧಿಕಾರಿಗಳ ಜತೆ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT