ಡಾ.ಹಂಪನಾಗೆ ಸೇಡಿಯಾಪು ಪ್ರಶಸ್ತಿ

7

ಡಾ.ಹಂಪನಾಗೆ ಸೇಡಿಯಾಪು ಪ್ರಶಸ್ತಿ

Published:
Updated:
ಡಾ.ಹಂಪನಾಗೆ ಸೇಡಿಯಾಪು ಪ್ರಶಸ್ತಿ

ಉಡುಪಿ: ಖ್ಯಾತ ವಿದ್ವಾಂಸ ಹಂಪ ನಾಗರಾಜಯ್ಯ ಅವರನ್ನು 2018ನೇ ಸಾಲಿನ ‘ಸೇಡಿಯಾಪು ಕೃಷ್ಣ ಭಟ್ಟ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾಶಾಸ್ತ್ರ, ಕಥನ, ಕಾವ್ಯ ಮತ್ತು ಸಂಶೋಧನಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಆಧರಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಫಲಕವನ್ನೊಳಗೊಂಡಿರುತ್ತದೆ. ಜೂನ್ 8ರಂದು ಉಡುಪಿಯ ನೂತನ ರವೀಂದ್ರ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry