ಎರಡು ದಿನ ಬ್ಯಾಂಕ್ ಮುಷ್ಕರ

5

ಎರಡು ದಿನ ಬ್ಯಾಂಕ್ ಮುಷ್ಕರ

Published:
Updated:
ಎರಡು ದಿನ ಬ್ಯಾಂಕ್ ಮುಷ್ಕರ

ಬೆಂಗಳೂರು: ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಎರಡು ದಿನಗಳ ಮುಷ್ಕರಕ್ಕೆ ಕರೆ ಕೊಟ್ಟಿರುವುದರಿಂದ ದೇಶದಾದ್ಯಂತ ಬುಧವಾರ ಮತ್ತು ಗುರುವಾರ ಬ್ಯಾಂಕಿಂಗ್‌ ಸೇವೆಗಳಿಗೆ ಧಕ್ಕೆ ಒದಗಲಿದೆ.

ಭಾರತೀಯ ಬ್ಯಾಂಕ್‌ಗಳ ಸಂಘವು (ಐಬಿಎ) ಮುಂದಿಟ್ಟಿರುವ ವೇತನ ಪರಿಷ್ಕರಣೆ ಪ್ರಸ್ತಾವ ವಿರೋಧಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ.

10 ಲಕ್ಷ ನೌಕರರು ಈ ಮುಷ್ಕರದಲ್ಲಿ ಭಾಗವಹಿಸುವುದರಿಂದ ಎಟಿಎಂಗಳ ಕಾರ್ಯನಿರ್ವಹಣೆಯೂ ಸೇರಿದಂತೆ ಬ್ಯಾಂಕ್‌ಗಳ ವಹಿವಾಟು ವ್ಯತ್ಯಯಗೊಳ್ಳಲಿದೆ. ಖಾಸಗಿ ಬ್ಯಾಂಕ್‌ಗಳು ಮಾತ್ರ ಎಂದಿನಂತೆ ಕಾರ್ಯನಿರ್ವಹಿಸಲಿವೆ.

‘ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಭಾರತೀಯ ಬ್ಯಾಂಕ್‌ಗಳ ಸಂಘದ (ಐಬಿಎ) ಜತೆ ನಡೆಸಿರುವ ಮಾತುಕತೆ ಫಲಪ್ರದವಾಗದ ಕಾರಣಕ್ಕೆ ಅನಿವಾರ್ಯವಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ’ ಎಂದು ಬ್ಯಾಂಕ್‌ ನೌಕರರ ಮುಖಂಡರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry