ರಾಜ್ಯಪಾಲರ ಕ್ರಮ ಪ್ರಶ್ನಿಸಿದ್ದ ಪಿಐಎಲ್‌ ವಜಾ

7

ರಾಜ್ಯಪಾಲರ ಕ್ರಮ ಪ್ರಶ್ನಿಸಿದ್ದ ಪಿಐಎಲ್‌ ವಜಾ

Published:
Updated:
ರಾಜ್ಯಪಾಲರ ಕ್ರಮ ಪ್ರಶ್ನಿಸಿದ್ದ ಪಿಐಎಲ್‌ ವಜಾ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ ರಾಜ್ಯಪಾಲರ ಕ್ರಮ ಸಂವಿಧಾನ ಬಾಹಿರ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಆದೇಶವಿದೆ. ಹೈಕೋರ್ಟ್ ಇದರಲ್ಲಿ ಮಧ್ಯ ಪ್ರವೇಶಿಸುವುದಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ಮತ್ತೊಂದು ಅರ್ಜಿ ವಜಾ: ಮತದಾರರ ಚೀಟಿಗಳ ಅಕ್ರಮ ಸಂಗ್ರಹಣೆ ಪ್ರಕರಣ ಪತ್ತೆಯಾಗಿದ್ದ ಕಾರಣ, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ರದ್ದುಪಡಿಸಬೇಕು ಅಥವಾ ಫಲಿತಾಂಶ ತಡೆಹಿಡಿಯಬೇಕು ಎಂದು ಕೋರಿ ನಗರದ ಸಮರ್ಪಣಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಹೊಸಮನಿ ಹಾಗೂ ದಯಾನಂದ ತಿಪ್ಪೇರುದ್ರಪ್ಪ ಅವರು ಸಲ್ಲಿಸಿದ್ದ ಅರ್ಜಿಯನ್ನೂ ಇದೇ ವಿಭಾಗೀಯ ನ್ಯಾಯಪೀಠ ಮಂಗಳವಾರ ವಜಾಗೊಳಿಸಿತು.

‘ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸುವ ಅಭ್ಯರ್ಥಿಗಳು, ಅವರ ಬೆಂಬಲಿಗರ ವಿರುದ್ಧ ಕ್ರಮ ಜರುಗಿಸಲು ನಿರ್ದೇಶಿಸಬೇಕು’ ಎಂದು ಕೋರಿದ್ದ ಅರ್ಜಿದಾರರ ಮತ್ತೊಂದು ಮನವಿಗೆ, ‘ಈ ಕುರಿತು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಿ’ ಎಂದು ನ್ಯಾಯಪೀಠ ಸೂಚಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry