ಇಂದು ಆರೋಗ್ಯ ತಪಾಸಣಾ ಶಿಬಿರ

7

ಇಂದು ಆರೋಗ್ಯ ತಪಾಸಣಾ ಶಿಬಿರ

Published:
Updated:

ದಾಬಸ್ ಪೇಟೆ: ಹೆಸರಘಟ್ಟ ಮುಖ್ಯರಸ್ತೆಯಲ್ಲಿನ ಸಪ್ತಗಿರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ದಾಬಸ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.

ಸ್ತ್ರೀರೋಗ ಮತ್ತು ಪ್ರಸೂತಿ, ಮೂಳೆ ಮತ್ತು ಕೀಲುರೋಗ ತಪಾಸಣೆ, ಹರ್ನಿಯಾ, ಪಿತ್ತಕೋಶದಲ್ಲಿ ಕಲ್ಲು, ಕಣ್ಣಿನ ತಪಾಸಣೆ, ಕಿವಿ, ಮೂಗು ಮತ್ತು ಗಂಟಲು ಹಾಗೂ ಶಸ್ತ್ರಚಿಕಿತ್ಸಾ ತಜ್ಞರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ನಡೆಯಲಿದೆ. ಅಗತ್ಯವಿರುವ ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಹಾಗೂ ಔಷಧಿಯನ್ನು ಸಪ್ತಗಿರಿ ಆಸ್ಪತ್ರೆಯಲ್ಲಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry