ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ವೃದ್ಧ ದಂಪತಿ ಸಾವು

3

ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ವೃದ್ಧ ದಂಪತಿ ಸಾವು

Published:
Updated:

ನೆಲಮಂಗಲ: ರಸ್ತೆ ಬದಿ ಹೊಟ್ಟು ತುಂಬಿಕೊಂಡು ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ವೃದ್ಧ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತಿಪ್ಪಗೊಂಡನಹಳ್ಳಿ ಗೇಟ್‌ ಬಳಿ ಘಟನೆ ನಡೆದಿದ್ದು, ಮೃತರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿಯ ನಿವೃತ್ತ ಶಿಕ್ಷಕ ಧರ್ಮಪ್ಪ (70) ಹಾಗೂ ಧನಲಕ್ಷ್ಮಿ (60)) ಎಂದು ಗುರುತಿಸಲಾಗಿದೆ.

ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಚಾಲಕ ಕರಿಗೌಡ ಪರಾರಿಯಾಗಿದ್ದು, ಗಾಯಗೊಂಡಿರುವ ನಿರ್ವಾಹಕ ಚಂದ್ರನಾಯಕ್‌ಗೆ ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry