ರಜನಿಕಾಂತ್ ನಟನೆಯ 'ಕಾಲಾ' ಸಿನಿಮಾ ಕರ್ನಾಟಕದಲ್ಲಿ ತೆರೆ ಕಾಣಲು ಅವಕಾಶ ಕೊಡುವುದಿಲ್ಲ

7

ರಜನಿಕಾಂತ್ ನಟನೆಯ 'ಕಾಲಾ' ಸಿನಿಮಾ ಕರ್ನಾಟಕದಲ್ಲಿ ತೆರೆ ಕಾಣಲು ಅವಕಾಶ ಕೊಡುವುದಿಲ್ಲ

Published:
Updated:
ರಜನಿಕಾಂತ್ ನಟನೆಯ 'ಕಾಲಾ' ಸಿನಿಮಾ ಕರ್ನಾಟಕದಲ್ಲಿ ತೆರೆ ಕಾಣಲು ಅವಕಾಶ ಕೊಡುವುದಿಲ್ಲ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಕರ್ನಾಟಕದ ವಿರುದ್ಧ ಹೇಳಿಕೆ ನೀಡಿದ್ದರಿಂದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹು ನಿರೀಕ್ಷಿತ ಕಾಲಾ ಚಿತ್ರ ರಾಜ್ಯದಲ್ಲಿ ತೆರೆ ಕಾಣಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ತಿಳಿಸಿದ್ದಾರೆ.

ಮಂಗಳವಾರ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಾ.ರಾ. ಗೋವಿಂದು, ಕಾವೇರಿ ವಿಚಾರದಲ್ಲಿ ರಜನಿಕಾಂತ್ ಅವರು ನೀಡಿರುವ ಹೇಳಿಕೆಯಿಂದ ನಮಗೆ ನೋವಾಗಿದೆ. ಈ ಚಿತ್ರ ತೆರೆ ಕಾಣಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿವೆ.ರಜನಿಕಾಂತ್ ಅವರ ಸಿನಿಮಾಗಳು ಇಷ್ಟ ಆಗಿದ್ದರೂ ಈ ಸಂದರ್ಭದಲ್ಲಿ ರಾಜ್ಯದಲ್ಲಿ ತೆರೆ ಕಾಣಲು ಅವಕಾಶ ನೀಡುವುದಿಲ್ಲ. ಅವರ ಸಿನಿಮಾವನ್ನು ರಾಜ್ಯದಲ್ಲಿ ಪ್ರದರ್ಶನ ಮಾಡದಂತೆ ಮತ್ತು ಯಾರೂ ವಿತರಣೆ ಕೂಡ ಮಾಡದಂತೆ ತೀರ್ಮಾನಿಸಲಾಗಿದೆ ಎಂದಿದ್ದಾರೆ.

ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ ಅರ್ಥದಲ್ಲಿ ರಜನಿಕಾಂತ್‌ ಇತ್ತೀಚಿಗೆ ನೀಡಿದ್ದ ಹೇಳಿಕೆಗೆ ಕನ್ನಡ ಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕದ ವಿರುದ್ಧ ನೀಡಿದ ಹೇಳಿಕೆಗೆ ಖಂಡನೆ ವ್ಯಕ್ತವಾದ ನಂತರವೂ ರಜನಿ ಅವರು ಕ್ಷಮೆ ಕೇಳಲಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry