ಗುರುವಾರ, 18 ಏಪ್ರಿಲ್ 2024
ADVERTISEMENT
ಈ ಕ್ಷಣ :
ADVERTISEMENT
ADVERTISEMENT
ಸಂತ್ರಸ್ತರ ರಕ್ಷಣೆಗಾಗಿ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ: ಸಿಎಂ ಕುಮಾರಸ್ವಾಮಿ
Last Updated 30 ಮೇ 2018, 3:18 IST
ಅಕ್ಷರ ಗಾತ್ರ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಸಂತ್ರಸ್ತರ ರಕ್ಷಣೆಗಾಗಿ ರಾಜ್ಯ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಯವರ ಫೇಸ್‍ಬುಕ್ ಪುಟದಲ್ಲಿ ಪ್ರಕಟವಾಗಿರುವ ಪೋಸ್ಟ್ ಹೀಗಿದೆ
ದಕ್ಷಿಣ ಕನ್ನಡ ಜಿಲ್ಲೆ  ಹಾಗೂ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ತೀವ್ರ ಮಳೆಯ ಪರಿಸ್ಥಿತಿಯನ್ನು ರಾಜ್ಯ ಸರಕಾರ ನಿಕಟವಾಗಿ ಗಮನಿಸುತ್ತಿದ್ದು, ಸಂತ್ರಸ್ತರ ರಕ್ಷಣೆಗೆ ಜಿಲ್ಲಾಡಳಿತಕ್ಕೆ ರಾಜ್ಯ ಸರಕಾರ ಸಕಲ ನೆರವು ನೀಡಲಿದೆ.
ದ.ಕ. ಜಿಲ್ಲೆಯಲ್ಲಿ ಅತಿವೃಷ್ಟಿ ಬಗ್ಗೆ ಇಂದು ಬೆಳಿಗ್ಗೆ ಅಲ್ಲಿನ ಜಿಲ್ಲಾಧಿಕಾರಿಗಳಿಂದ ತಾನು ಮಾಹಿತಿ ಪಡೆದಿದ್ದು, ಮಳೆ ಹಾನಿ ತೀವ್ರತೆ ಕಡಿಮೆಗೊಳಿಸಲು ಮತ್ತು ಸಂತ್ರಸ್ತರ ಪ್ರಾಣಹಾನಿ ತಪ್ಪಿಸಲು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಒತ್ತು ನೀಡಲು ಸೂಚಿಸಿದ್ದೇನೆ.
ಈಗಾಗಲೇ ಜಿಲ್ಲಾಡಳಿದೊಂದಿಗೆ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಸರಕಾರ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯ ಮೇಲೆ ನಿಗಾ ಇಡಲಾಗಿದೆ.
ಮಳೆಯಿಂದ ಹಾನಿಗೊಂಡಿರುವ ರಸ್ತೆ, ವಿದ್ಯುತ್ ಸಂಪರ್ಕಗಳನ್ನು ಆದ್ಯತೆಯಲ್ಲಿ ದುರಸ್ತಿಗೊಳಿಸಲಾಗುವುದು. ಸಮುದ್ರ ತೀರ ಪ್ರದೇಶಗಳಲ್ಲಿ ಕಡಲಕೊರತೆ ಸಾಧ್ಯತೆ ಇರುವುದರಿಂದ ಈ ಬಗ್ಗೆ ನಿಗಾ ಇಡಲೂ ಸೂಚಿಸಲಾಗಿದೆ. ಈಗಾಗಲೇ ಮಂಗಳೂರು ಮತ್ತು ಉಡುಪಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF) ಕಳುಹಿಸಲಾಗಿದೆ. ಅತಿವೃಷ್ಟಿಯ ಈ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರಕಾರ ಜನತೆಯೊಂದಿಗೆ ಇದೆ. ಸಾರ್ವಜನಿಕರೂ ಈ ನಿಟ್ಟಿನಲ್ಲಿ ಸರಕಾರದೊಂದಿಗೆ ಸಹಕರಿಸಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT