ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ; ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದಿಂದ ಕಾರ್ಯಾಚರಣೆ

7

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ; ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದಿಂದ ಕಾರ್ಯಾಚರಣೆ

Published:
Updated:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ; ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದಿಂದ ಕಾರ್ಯಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ.

ಇಂದು ಬೆಳಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಮಂಗಳೂರಿಗೆ ತಲುಪಿದ್ದು, ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು  ರೈಲು, ವಿಮಾನ ಸೇವೆಯಲ್ಲಿಯೂ ವ್ಯತ್ಯಯವುಂಟಾಗಿದೆ.

ಸಹಾಯವಾಣಿ
ಮಂಗಳೂರಿನಲ್ಲಿ ನೆರೆ ಸಂತ್ರಸ್ತರು ನಿಯಂತ್ರಣಾ ಕೊಠಡಿ 1077 ಸಂಖ್ಯೆಗೆ ಕರೆ ಮಾಡಿ ಸಹಾಯ ಕೋರಬಹುದು.
ಜಿಲ್ಲಾಡಳಿತದ ಸಹಾಯವಾಣಿ :  9448549445 ಮತ್ತು 9448104455.

ಉಡುಪಿಯಲ್ಲಿಯೂ ಮತ್ತೆ ಮಳೆ ಆರಂಭ

ಉಡುಪಿ: ಕೆಲಕಾಲ ಬಿಡುವುಕೊಟ್ಟಿದ್ದ ಮಳೆ ಮತ್ತೆ ಆರಂಭವಾಗಿದೆ. ಜಿಟಿಜಿಟಿ ಮಳೆ ಸುರಿಯುತ್ತಿದೆ. ಇಲ್ಲಿನ ಉದ್ಯಾವರ ಸುತ್ತಮುತ್ತಲಿನ ಪರಿಸರದಲ್ಲಿ ಹಲವು ಮರಗಳು ಬಿದ್ದಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಹಲವೆಡೆ ವಿದ್ಯುತ್ ಸಂಪರ್ಕ ಕಂಬಗಳು ಬಿದ್ದಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಬೆಳಗ್ಗೆ ೧೧ ಕ್ಕೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ.

ಕರಾವಳಿಗೆ ಇಂದು ಕಾಲಿಡಲಿದೆ ನೈರುತ್ಯ ಮುಂಗಾರು

ಕರ್ನಾಟಕದ ಕರಾವಳಿ ಪ್ರದೇಶಗಳಿಗೆ ನೈರುತ್ಯ ಮುಂಗಾರು ಬುಧವಾರ ಕಾಲಿಡಲಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ಹೇಳಿದೆ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕರ್ನಾಟಕದ ಕರಾವಳಿಗೆ ಮುಂಗಾರು ಆಗಮಿಸಲಿದ್ದು ಭಾರಿ ಮಳೆ ಮುಂದುವರಿಯಲಿದೆ,

ಸಹಾಯಕ್ಕೆ 'ಸಂಘ ನಿಕೇತನ'
ಮಂಗಳೂರಿನಲ್ಲಿ ನೆರೆ ಸಂತ್ರಸ್ತರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಮತ್ತು  ಬಿಜೆಪಿ ಕಾರ್ಯಕರ್ತರು ಸಂಘದ ಕಾರ್ಯಾಲಯ ಸಂಘನಿಕೇತನದಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸುವ ಮೂಲಕ ಸಹಾಯ ಮಾಡುತ್ತಿದ್ದಾರೆ.
ಸಂಘ ನಿಕೇತನದ ದೂರವಾಣಿ:
9845226237
0824 2973571 , 2421571
 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry