ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಮರುಮೌಲ್ಯಮಾಪನ: ಬೆಳಗಾವಿಯ ಮೊಹಮ್ಮದ್‌ ರಾಜ್ಯಕ್ಕೆ ಪ್ರಥಮ

Last Updated 30 ಮೇ 2018, 10:59 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಕ್ಯಾಂಪ್‌ನ ಸೇಂಟ್‌ ಕ್ಸೇವಿಯರ್‌ ಪ್ರೌಢಶಾಲೆಯ ಇಂಗ್ಲಿಷ್‌ ಮಾಧ್ಯಮದ ವಿದ್ಯಾರ್ಥಿ ಮೊಹಮ್ಮದ್‌ ಕೈಫ್‌ ಮುಲ್ಲಾ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮರುಮೌಲ್ಯಮಾಪನದ ನಂತರ ರಾಜ್ಯಕ್ಕೆ ಟಾಪರ್‌ ಎನಿಸಿದ್ದಾರೆ. 625ಕ್ಕೆ 625 ಅಂಕ ಪಡೆದ ಜಿಲ್ಲೆಯ ಮೊದಲಿಗ ಎನ್ನುವ ದಾಖಲೆಯನ್ನೂ ಅವರು ಬರೆದಿದ್ದಾರೆ.

625ಕ್ಕೆ 624 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಮತ್ತು ರಾಜ್ಯಕ್ಕೆ 2ನೇ ಸ್ಥಾನ ಗಳಿಸಿದ್ದರು. ಪ್ರಥಮ ಭಾಷೆ ಇಂಗ್ಲಿಷ್‌ನಲ್ಲಿ 125ಕ್ಕೆ 125, ದ್ವಿತೀಯ ಭಾಷೆ ಕನ್ನಡ ಸೇರಿದಂತೆ ಇತರ ಎಲ್ಲ ವಿಷಯಗಳಲ್ಲೂ 100ಕ್ಕೆ 100 ಅಂಕಗಳನ್ನು ಪಡೆದಿದ್ದರು. ವಿಜ್ಞಾನದಲ್ಲಿ 99 ಅಂಕ ಗಳಿಸಿದ್ದರು.

‘ಎಲ್ಲ ವಿಷಯದಲ್ಲೂ ಗರಿಷ್ಠ ಅಂಕಗಳನ್ನು ನಿರೀಕ್ಷಿಸಿದ್ದೆ. ವಿಜ್ಞಾನದಲ್ಲಿ ಒಂದು ಅಂಕ ಕಡಿಮೆಯಾಗಿದ್ದರಿಂದ ಕೊಂಚ ಬೇಸರವಾಗಿತ್ತು. ಚೆನ್ನಾಗಿ ಪರೀಕ್ಷೆ ಬರೆದಿದ್ದ ವಿಶ್ವಾಸ ಇದ್ದುದ್ದರಿಂದ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದೆ. ಈಗ ರಾಜ್ಯದ ಟಾಪರ್‌ಗಳಲ್ಲಿ ಒಬ್ಬನಾಗಿರುವುದಕ್ಕೆ ಖುಷಿಯಾಗುತ್ತಿದೆ’ ಎಂದು ಮೊಹಮ್ಮದ್‌ ಸಂತಸ ಹಂಚಿಕೊಂಡರು.

ಇವರು ಪ್ರಸ್ತುತ, ಇಲ್ಲಿನ ಕೆಎಲ್‌ಇ ಸಂಸ್ಥೆಯ ಆರ್‌ಎಲ್‌ಎಸ್‌ ಕಾಲೇಜಿನಲ್ಲಿ ಪಿಯುಗೆ (ವಿಜ್ಞಾನ) ಪ್ರವೇಶ ಪಡೆದಿದ್ದಾರೆ. ‘ಉನ್ನತ ಶಿಕ್ಷಣ ಪಡೆದು, ಯುಪಿಎಸ್‌ಸಿ ಪರೀಕ್ಷೆ ಪಾಸು ಮಾಡಬೇಕು. ಐಎಎಸ್‌ ಅಧಿಕಾರಿ ಆಗಬೇಕು ಎನ್ನುವ ಬಯಕೆ ಇದೆ’ ಎನ್ನುತ್ತಾರೆ ಅವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT