ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಪೆಟ್ರೋಲ್ ಮತ್ತು ಡೀಸೆಲ್ ದರ ₹1 ರೂಪಾಯಿ ಇಳಿಕೆ

Last Updated 30 ಮೇ 2018, 12:54 IST
ಅಕ್ಷರ ಗಾತ್ರ

ತಿರುವನಂತಪುರ: ದೇಶದಲ್ಲೇ ಪೆಟ್ರೋಲ್ ಮತ್ತು ಡಿಸೇಲ್ ದರ ಇಳಿಕೆ ಕುರಿತಾಗಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ  ಬೆನ್ನಲ್ಲೇ ಕೇರಳ ಸರ್ಕಾರ ತೈಲ ದರವನ್ನು ₹1 ರೂಪಾಯಿಯಷ್ಟು ಇಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಈ ಮೂಲಕ ತೈಲ ದರವನ್ನು ₹1 ರೂಪಾಯಿ ಇಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ತೈಲ ಇಳಿಕೆ ನಿರ್ಣಯ ಜೂನ್. 1ರಿಂದ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಎರಡು ವಾರಗಳ ಹಿಂದೆ ಪೆಟ್ರೋಲ್ ಪ್ರತಿ ಲೀಟರ್ ದರ 3.8 ಹಾಗೂ ಡೀಸೆಲ್ ದರ 3.38ರಷ್ಟು ಏರಿಕೆಯಾಗಿತ್ತು.

ಬುಧವಾರ ಪೆಟ್ರೋಲ್‌ ಮತ್ತು ಡಿಸೇಲ್ ದರ 1 ಪೈಸೆಯಷ್ಟು ಇಳಿಕೆಯಾಗಿದ್ದು,  ಈ ನಿರ್ಣಯದ ಬಗ್ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ, ತಾಂತ್ರಿಕ ದೋಷದಿಂದ ದರ ಇಳಿಕೆ 60 ಪೈಸೆ ಎಂದು ಪ್ರಕಟಗೊಂಡಿರುವುದಾಗಿ ಐಒಸಿಎಲ್‌ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT