ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಲಪಾಡ್‌ ಹ್ಯಾರೀಸ್‌ ಜಾಮೀನು ಅರ್ಜಿ ವಜಾ

ನಲಪಾಡ್‌ಗೆ ಜೈಲೇ ಗತಿ..!
Last Updated 30 ಮೇ 2018, 11:45 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ವತ್‌ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೈಲು ಸೇರಿರುವ ಮೊಹಮದ್‌ ನಲಪಾಡ್‌ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್‌ ವಜಾ ಮಾಡಿದೆ. 

ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ 63ನೇ ಸೆಷನ್ಸ್ ನ್ಯಾಯಾಲಯ, ಆರೋಪಿ ಪರ ವಕೀಲ ಉಸ್ಮಾನ್ ಹಾಗೂ ವಿದ್ವತ್‌ ಪರ ಪ್ರಾಸಿಕ್ಯೂಟರ್ ಎಂ.ಎಸ್.ಶ್ಯಾಮಸುಂದರ್ ವಾದ ಆಲಿಸಿತು.‌

ಶ್ಯಾಮಸುಂದರ್, ‘ದೋಷಾರೋಪ ಪಟ್ಟಿ ಸಲ್ಲಿಸಿದ ಕೂಡಲೇ ಜಾಮೀನು ನೀಡಲೇಬೇಕು ಎಂದೇನಿಲ್ಲ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವಷ್ಟು ಆರೋಪಿಯು ಪ್ರಬಲನಾಗಿದ್ದಾನೆ. ಪ್ರಕರಣದ ಇನ್ನೊಬ್ಬ ಆರೋಪಿ ಶ್ರೀಕೃಷ್ಣ ತಲೆಮರೆಸಿ ಕೊಂಡಿದ್ದಾನೆ. ಹೀಗಾಗಿ, ಜಾಮೀನು ನೀಡಬಾರದು’ ಎಂದು ಕೋರಿದ್ದರು. ನಲಪಾಡ್‌ ಪರ ಉಸ್ಮಾನ್‌ ವಾದ ಮಂಡಿಸಿ ನಲಪಾಡ್‌ಗೆ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರೂ ಸಾಕ್ಷಾಧಾರಗಳು ನಶಿಸಿ ಹೋಗುತ್ತವೆ ಎಂದು ಸೆಷನ್ಸ್‌ ಕೋರ್ಟ್‌ ಜಾಮೀನು ನೀಡದೆ ಅರ್ಜಿಯನ್ನು ಸೆಷನ್ಸ್‌ ಕೋರ್ಟ್‌ ವಜಾ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT