ಮರು ಮೌಲ್ಯಮಾಪನ: ಬೆಳಗಾವಿಯ ಮೊಹಮ್ಮದ್‌ ಟಾಪರ್‌

7

ಮರು ಮೌಲ್ಯಮಾಪನ: ಬೆಳಗಾವಿಯ ಮೊಹಮ್ಮದ್‌ ಟಾಪರ್‌

Published:
Updated:
ಮರು ಮೌಲ್ಯಮಾಪನ: ಬೆಳಗಾವಿಯ ಮೊಹಮ್ಮದ್‌ ಟಾಪರ್‌

ಬೆಳಗಾವಿ: ಇಲ್ಲಿನ ಕ್ಯಾಂಪ್‌ನ ಸೇಂಟ್‌ ಕ್ಸೇವಿಯರ್‌ ಪ್ರೌಢಶಾಲೆಯ ಇಂಗ್ಲಿಷ್‌ ಮಾಧ್ಯಮದ ವಿದ್ಯಾರ್ಥಿ ಮೊಹಮ್ಮದ್‌ ಕೈಫ್‌ ಮುಲ್ಲಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ, ಮರುಮೌಲ್ಯಮಾಪನದ ನಂತರ ರಾಜ್ಯಕ್ಕೆ ಟಾಪರ್‌ ಎನಿಸಿದ್ದಾರೆ. 625ಕ್ಕೆ 625 ಅಂಕ ಪಡೆದ ಜಿಲ್ಲೆಯ ಮೊದಲಿಗ ಎನ್ನುವ ದಾಖಲೆಯನ್ನೂ ಅವರು ಬರೆದಿದ್ದಾರೆ.

625ಕ್ಕೆ 624 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಮತ್ತು ರಾಜ್ಯಕ್ಕೆ 2ನೇ ಸ್ಥಾನ ಗಳಿಸಿದ್ದರು. ಪ್ರಥಮ ಭಾಷೆ ಇಂಗ್ಲಿಷ್‌ನಲ್ಲಿ 125ಕ್ಕೆ 125, ದ್ವಿತೀಯ ಭಾಷೆ ಕನ್ನಡ ಸೇರಿದಂತೆ ಇತರ ಎಲ್ಲ ವಿಷಯಗಳಲ್ಲೂ 100ಕ್ಕೆ 100 ಅಂಕಗಳನ್ನು ಪಡೆದಿದ್ದರು. ವಿಜ್ಞಾನದಲ್ಲಿ 99 ಅಂಕ ಗಳಿಸಿದ್ದರು.

‘ಎಲ್ಲ ವಿಷಯದಲ್ಲೂ ಗರಿಷ್ಠ ಅಂಕಗಳನ್ನು ನಿರೀಕ್ಷಿಸಿದ್ದೆ. ವಿಜ್ಞಾನದಲ್ಲಿ ಒಂದು ಅಂಕ ಕಡಿಮೆಯಾಗಿದ್ದರಿಂದ ಕೊಂಚ ಬೇಸರವಾಗಿತ್ತು. ಚೆನ್ನಾಗಿ ಪರೀಕ್ಷೆ ಬರೆದಿದ್ದ ವಿಶ್ವಾಸ ಇದ್ದುದ್ದರಿಂದ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದೆ. ಈಗ ರಾಜ್ಯದ ಟಾಪರ್‌ಗಳಲ್ಲಿ ಒಬ್ಬನಾಗಿರುವುದಕ್ಕೆ ಖುಷಿಯಾಗುತ್ತಿದೆ’ ಎಂದು ಮೊಹಮ್ಮದ್‌ ಸಂತಸ ಹಂಚಿಕೊಂಡರು.

ಇವರು ಪ್ರಸ್ತುತ, ಇಲ್ಲಿನ ಕೆಎಲ್‌ಇ ಸಂಸ್ಥೆಯ ಆರ್‌ಎಲ್‌ಎಸ್‌ ಕಾಲೇಜಿನಲ್ಲಿ ಪಿಯುಸಿಗೆ (ವಿಜ್ಞಾನ) ಪ್ರವೇಶ ಪಡೆದಿದ್ದಾರೆ. ‘ಮುಂದೆ ಯುಪಿಎಸ್‌ಸಿ ಪರೀಕ್ಷೆ ಪಾಸು ಮಾಡಬೇಕು. ಐಎಎಸ್‌ ಅಧಿಕಾರಿ ಆಗಬೇಕು ಎನ್ನುವ ಬಯಕೆ ಇದೆ’ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry