ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಮನೆಯಲ್ಲಿ ಸಿಬಿಐ ಶೋಧ

7

ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಮನೆಯಲ್ಲಿ ಸಿಬಿಐ ಶೋಧ

Published:
Updated:

ನವದೆಹಲಿ: ಎಂಜಿನಿಯರ್‌ಗಳ ನೇಮಕಾತಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರದ ಲೋಕೋಪಯೋಗಿ ಸಚಿವ ಸತ್ಯೇಂದ್ರ ಜೈನ್‌ ಅವರ ನಿವಾಸದಲ್ಲಿ ಸಿಬಿಐ ಬುಧವಾರ ಶೋಧ ನಡೆಸಿದೆ.

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಖಾಸಗಿ ವ್ಯಕ್ತಿಗಳು ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಜೈನ್‌ ಅವರು ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. ತಮ್ಮ ನಿವಾಸದಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸಿದ್ದನ್ನು ಸಚಿವರು ಟ್ವೀಟ್‌ ಮಾಡಿದ್ದಾರೆ.

ಅನುಭವ ಇಲ್ಲದ 24 ಮಂದಿ ಎಂಜಿನಿಯರ್‌ಗಳನ್ನು ಏಜೆನ್ಸಿ ಮೂಲಕ ನೇಮಕಾತಿ ಮಾಡಿಕೊಂಡಿದ್ದು, ಈ ಸಂಬಂಧ ಸಿಬಿಐ ಪ್ರಾಥಮಿಕ ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಜ್ರಿವಾಲ್‌ ಕಿಡಿ: ಸಚಿವರ ನಿವಾಸದಲ್ಲಿ ಸಿಬಿಐ ಶೋಧ ನಡೆಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ‘ಪ್ರಧಾನಿ ನರೇಂದ್ರ ಮೋದಿ ಏನನ್ನು ಬಯಸುತ್ತಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ.

‘ನಮ್ಮ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ದಾಳಿ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ ಎಂದು ದೂರಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry