‘ಯಶಸ್ವಿನಿ ಯೋಜನೆ ಮುಂದುವರಿಕೆ’

7

‘ಯಶಸ್ವಿನಿ ಯೋಜನೆ ಮುಂದುವರಿಕೆ’

Published:
Updated:
‘ಯಶಸ್ವಿನಿ ಯೋಜನೆ ಮುಂದುವರಿಕೆ’

ಬೆಂಗಳೂರು: ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಈ ಯೋಜನೆ ಇದೇ31ಕ್ಕೆ ಕೊನೆಗೊಳ್ಳುತ್ತಿದ್ದು, ಇದನ್ನೇ ಮುಂದುವರಿಸಬೇಕು ಎಂದು ರೈತರು ಬುಧವಾರ ವಿಧಾನಸೌಧದಲ್ಲಿ ನಡೆದ ಸಾಲ ಮನ್ನಾ ಕುರಿತ ಸಭೆಯಲ್ಲಿ ಆಗ್ರಹಿಸಿದರು.

ರಾಜ್ಯದ ರೈತರ ಹಿತದೃಷ್ಠಿಯಿಂದ ಯಶಸ್ವಿನಿ ಯೋಜನೆಯನ್ನು ಮುಂದುವರೆಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕುಮಾರಸ್ವಾಮಿ ಪ್ರಕಟಿಸಿದರು.

ಯಶಸ್ವಿನಿ ಯೋಜನೆಯನ್ನು ನಿಲ್ಲಿಸುತ್ತಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ  ಹೈಕೋರ್ಟ್‌  ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿತ್ತು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry