7

ಸಿಂದಗಿ: ಬಾಲಕಿ ಮೇಲೆ ಅತ್ಯಾಚಾರ, ಕೊಲೆ

Published:
Updated:

ಸಿಂದಗಿ (ವಿಜಯಪುರ): ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ರಾತ್ರಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವುದು ಬುಧವಾರ ಬೆಳಕಿಗೆ ಬಂದಿದೆ.

ಮಂಗಳವಾರ ಸಂಜೆ ಆಟವಾಡಲು ಹೊರ ಹೋಗಿದ್ದ ಬಾಲಕಿ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಆತಂಕಗೊಂಡ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದರು. ಸಿಗದಿದ್ದಾಗ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಬೆಳಿಗ್ಗೆ ಬಾಲಕಿಯ ಶವ ವಿದ್ಯಾನಗರದ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಪತ್ತೆ ಆಗಿದೆ. ಬಾಲಕಿಯ ತಾಯಿ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ಘಟನೆ ಕುರಿತು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry