ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್‌ ಸೋದರರ 11 ಆಪ್ತರ ಮನೆಗಳ ಮೇಲೆ ಸಿಬಿಐ ದಾಳಿ

ಪ್ರತೀಕಾರದ ರಾಜಕಾರಣ ಡಿಕೆಶಿ ಆರೋಪ
Last Updated 31 ಮೇ 2018, 7:12 IST
ಅಕ್ಷರ ಗಾತ್ರ

ಬೆಂಗಳೂರು: ಕನಕಪುರ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರ 11 ಆಪ್ತರ ಮನೆಗಳ ಮೇಲೆ ಸಿಬಿಐ ಇಂದು (ಗುರುವಾರ) ದಾಳಿ ನಡೆಸಿದೆ.

ಸಿಬಿಐ ನ್ಯಾಯಾಲಯದಿಂದ ನಿನ್ನೆ (ಬುಧವಾರ) ರಾತ್ರಿಯೇ ಸರ್ಚ್‌ ವಾರಂಟ್ ಪಡೆದುಕೊಂಡಿದ್ದ ಅಧಿಕಾರಿಗಳ ತಂಡ ಮುಂಜಾನೆಯೇ ಕಾರ್ಯಾಚರಣೆ ಆರಂಭಿಸಿತು.

ಈ ಹಿಂದೆ ಗುಜರಾತ್‌ನ ಶಾಸಕರನ್ನು ರಾಜ್ಯಕ್ಕೆ ಕರೆತಂದು, ರೆಸಾರ್ಟ್‌ನಲ್ಲಿ ಉಳಿಸಿಕೊಂಡಿದ್ದ ಸಂದರ್ಭ ಡಿ.ಕೆ.ಶಿವಕುಮಾರ್ ಅವರ ಮನೆಯ ಮೇಲೆ ದಾಳಿ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

‍[related]

ಇಂದು ಮುಂಜಾನೆಯಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್‌, ‘ಬುಧವಾರ ಸಿಬಿಐ ಕೋರ್ಟ್‌ನಿಂದ ಸರ್ಚ್‌ ವಾರಂಟ್‌ ಪಡೆದಿರುವ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಡಿ.ಕೆ.ಸುರೇಶ್‌ ಸೇರಿ 11 ಜನರ ವಿರುದ್ಧ ಪ್ರಕರಣ ದಾಖಲಿಸಲು ಕೇಂದ್ರ ಸರ್ಕಾರ ಮುಂದಾಗಿದೆ’ ಎಂದು ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT