ಸರ್ಕಾರ ಬದಲಾಗಿರುವುದು ಜನರಿಗೆ ಗೊತ್ತಾಗಬೇಕು: ಕುಮಾರಸ್ವಾಮಿ

7
ಪೊಲೀಸ್ ಅಧಿಕಾರಿಗಳೊಂದಿಗೆ ಕುಮಾರಸ್ವಾಮಿ ಚರ್ಚೆ

ಸರ್ಕಾರ ಬದಲಾಗಿರುವುದು ಜನರಿಗೆ ಗೊತ್ತಾಗಬೇಕು: ಕುಮಾರಸ್ವಾಮಿ

Published:
Updated:
ಸರ್ಕಾರ ಬದಲಾಗಿರುವುದು ಜನರಿಗೆ ಗೊತ್ತಾಗಬೇಕು: ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರ ಬದಲಾಗಿದೆ. ಸರ್ಕಾರ ಬದಲಾಗಿರುವುದು ಜನತೆಗೆ ಗೊತ್ತಾಗುವಂತೆ ನೀವು ಕೆಲಸ ಮಾಡಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.

ನಗರದಲ್ಲಿ ಇಂದು (ಗುರುವಾರ) ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರಾಮಾಣಿಕವಾಗಿ ಕೆಲಸ ಮಾಡಿ. ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ನೀವೂ ಅಷ್ಟೇ, ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಬೇಡಿ ಎಂದು ಕಿವಿಮಾತು ಹೇಳಿದರು.

ರೌಡಿಸಂ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟಹಾಕಲು ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಕಾನೂನು ಪಾಲನೆಗೆ ಹೆಚ್ಚಿನ ಒತ್ತು ನೀಡಿ. ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಕರೆಯುತ್ತೇನೆ. ಆ ಸಭೆಯಲ್ಲಿ ಇಲಾಖೆಗೆ ಸಂಬಂಧಪಟ್ಟ ಎಲ್ಲ ವಿಷಯದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

ಡಿಜಿ ನೀಲಮಣಿ ರಾಜು ಸೇರಿ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry