ಆದಾಯ ತೆರಿಗೆ: ದೂರು ಇತ್ಯರ್ಥ

7

ಆದಾಯ ತೆರಿಗೆ: ದೂರು ಇತ್ಯರ್ಥ

Published:
Updated:
ಆದಾಯ ತೆರಿಗೆ: ದೂರು ಇತ್ಯರ್ಥ

ಬೆಂಗಳೂರು: ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದ ಮೇಲ್ಮನವಿ ಮತ್ತು ಪರಿಹಾರಕ್ಕೆ ಸಂಬಂಧಿಸಿದ ದೂರುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಆದಾಯ ತೆರಿಗೆ ಇಲಾಖೆಯು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

ಜೂನ್‌ 1 ರಿಂದ 15ರವರೆಗೆ ತೆರಿಗೆ ಅಧಿಕಾರಿಗಳು ತೆರಿಗೆದಾರರ ಅಹವಾಲು ಇತ್ಯರ್ಥಪಡಿಸಲು ಆದ್ಯತೆ ನೀಡಲಿದ್ದಾರೆ. ಇದುವರೆಗೆ ಇತ್ಯರ್ಥವಾಗದ ಪ್ರಕರಣಗಳನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುವುದು.  ತೆರಿಗೆದಾರರು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯ ಅವಧಿಯಲ್ಲಿ ಸಂಬಂಧಿತ ಅಧಿಕಾರಿಗಳನ್ನು ಭೇಟಿಯಾಗಬೇಕು ಎಂದು ಸೂಚಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry